ನಿವೃತ್ತ ಲೋಕಾಯುಕ್ತ ಎನ್.ವೆಂಕಟಾಚಲಯ್ಯ ವಿಧಿವಶ…

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಿವೃತ್ತ ಲೋಕಾಯುಕ್ತ ಎನ್ ವೆಂಕಟಾಚಲ (90) ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಅವರು 1930 ಜುಲೈ 3ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮಿತ್ತೂರು ಗ್ರಾಮದಲ್ಲಿ ಜನಿಸಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದ ಅವರು 2001 ರಿಂದ 2006 ರವರೆಗೆ ಕರ್ನಾಟಕ ಲೋಕಾಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಲ್ಲಿ ನಡುಕ ಹುಟ್ಟಿಸಿದ್ದರು.
ನಂಜೇಗೌಡ ವೆಂಕಟಾಚಲ ಅವರ ಪೂರ್ಣ ಹೆಸರು. ಅವರು ಕರ್ನಾಟಕದ ಲೋಕಾಯುಕ್ತರಾಗಿ ಹಾಗೂ 18 ತಿಂಗಳು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಧೀಶರಾಗಿ ಕೂಡ ಸೇವೆ ಸಲ್ಲಿಸಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button