ರಾಜ್ಯ ಕಾಂಗ್ರೆಸ್ ನಾಯಕರಿಂದ ರಾಹುಲ್ ಗಾಂಧಿಯವರೊಂದಿಗೆ ಸಮಾಲೋಚನೆ…

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರೊಂದಿಗೆ ರಾಜ್ಯ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಫೆ. 24 ರಂದು ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಬಿ.ಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಧ್ರುವ ನಾರಾಯಣ, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ ಜಿ ಪರಮೇಶ್ವರ್, ವಿಧಾನ ಸಭೆ ಉಪ ನಾಯಕರಾದ ಯು.ಟಿ ಖಾದರ್, ಸಿ.ಡ್ಬ್ಲು.ಸಿ ಸದಸ್ಯರಾದ ಕೆ.ಎಚ್.ಮುನಿಯಪ್ಪ, ಎಚ್.ಕೆ ಪಾಟೀಲ್, ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ ಎಂ.ಬಿ ಪಾಟೀಲ್, ಕೆ.ಜೆ ಜಾರ್ಜ್, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

Sponsors

Related Articles

Back to top button