ಶ್ರೀರಾಮ ಪ್ರಥಮ ದರ್ಜೆ ಕಾಲೇಜು – ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ…

ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಶ್ರೀರಾಮ ವಿದ್ಯಾಸಂಸ್ಥೆಯ ಸಂಸ್ಥಾಪಕರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಆಗಿರುವ ಡಾl ಪ್ರಭಾಕರ ಭಟ್ ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘದ ಲಾಂಛನ ಬಿಡುಗಡೆ ಮಾಡಿದರು.
ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ನರಿಂಗಾನ, ಮುಖ್ಯ ಅತಿಥಿಯಾಗಿ ಕಲಾವಿದರಾದ ಬಡೆಕ್ಕಿಲ ಪ್ರದೀಪ, ಯಕ್ಷಗಾನ ಕಲಾವಿದೆ ಅಮೃತ ಅಡಿಗ,ಪ್ರಾಚಾರ್ಯರಾದ ಕೃಷ್ಣಪ್ರಸಾದ ಕಾಯಾರ್ಕಟ್ಟೆ, ಹಿರಿಯ ವಿದ್ಯಾರ್ಥಿ ಸಂಘದ ಸಂಯೋಜಕ ಯತಿರಾಜ್ ಪಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Sponsors

Related Articles

Back to top button