ಕೆಎಸ್ಆರ್ ಟಿಸಿ ಬಸ್ ಪ್ರಯಾಣ ದರ 12% ಹೆಚ್ಚಳ…
ಬೆಂಗಳೂರು: ಬಿಎಂಟಿಸಿ ಹೊರತು ಪಡಿಸಿ ಕೆಎಸ್ಆರ್ಟಿಸಿ, ಈಶಾನ್ಯ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆಗಳ ಪ್ರಯಾಣ ದರವನ್ನ ಶೇ 12% ನಷ್ಟು ಏರಿಕೆ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಲಿದ್ದು, ಶೇ 12% ನಷ್ಟು ಬಸ್ ಪ್ರಯಾಣ ದರ ಹೆಚ್ಚಿಸಿ ರಾಜ್ಯ ಸರ್ಕಾರ ಅನುಮೋದನೆ ಹೊರಡಿಸಿದೆ. ಟಿಕೆಟ್ ದರ ಏರಿಕೆ ಮಾಡುವಂತೆ ಹಲವು ಬಾರಿ ರಾಜ್ಯ ಸಾರಿಗೆ ನಿಗಮ ಪ್ರಸ್ತಾವನೆ ಸಲ್ಲಿಸಿತ್ತು.
Sponsors