ಬೆಂಕಿ ಇಲ್ಲದ ಅಡುಗೆ ಸ್ಪರ್ಧೆ….

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪ್ರದರ್ಶನ ಸಲುವಾಗಿ ಬೆಂಕಿ ಇಲ್ಲದ ಅಡುಗೆ ಸ್ಪರ್ಧೆಯನ್ನು ಡಿ. 1 ರಂದು ಏರ್ಪಡಿಸಲಾಯಿತು.
“ಮಗುವಿನ ಬೌದ್ಧಿಕ, ಭೌತಿಕ, ಸಾಮಾಜಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ನೈತಿಕ, ಆಧ್ಯಾತ್ಮಿಕ ಮೌಲ್ಯಗಳಿರುವ, ಪ್ರಬಲವಾಗಿರುವ ಬುದ್ಧಿಶಕ್ತಿಯನ್ನು ಉತ್ತೇಜಿಸಿ ಸದೃಢರನ್ನಾಗಿ ಮಾಡುವುದೇ ಶಿಕ್ಷಣ. ಜೀವನದಲ್ಲಿ ಯಾವುದೇ ಸಾಧನೆಗೆ ಮಾನವನ ಬುದ್ಧಿ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯೆ-ಬುದ್ಧಿ ಇವೆರಡು ಜೀವನ ಪರ್ಯಂತ ಜೊತೆ-ಜೊತೆಯಲ್ಲೇ ಸಾಗುತ್ತಿರುತ್ತದೆ. ಇಂತಹ ಸ್ಪರ್ಧೆಗಳಿಂದ ಮಕ್ಕಳ ಜೀವನ ಕೌಶಲ್ಯಗಳು ಅಭಿವೃದ್ಧಿಯಾಗುತ್ತದೆ” ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ|ಪ್ರಭಾಕರ್ ಭಟ್ ಕಲ್ಲಡ್ಕರವರು ನುಡಿದರು.
3ನೇ ತರಗತಿಯಿಂದ 7ನೇ ತರಗತಿಯವರೆಗೆ ತರಗತಿವಾರು ಈ ಸ್ಪರ್ಧೆಗಳನ್ನು ನಡೆಸಲಾಯಿತು. ಒಟ್ಟು 150 ವಿದ್ಯಾರ್ಥಿಗಳು ಭಾಗವಹಿಸಿದ್ದು ವಿವಿಧ ಬಗೆಯ ತಿಂಡಿ-ತಿನಿಸುಗಳನ್ನು ಬೆಂಕಿ ಇಲ್ಲದೇ ತಯಾರಿಸಿದರು.
ಡಾ|ಪ್ರಭಾಕರ್ ಭಟ್ ಕಲ್ಲಡ್ಕ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ರವಿರಾಜ್ ಕಣಂತೂರುರವರು ಉಪಸ್ಥಿತರಿದ್ಧರು.

Sponsors

Related Articles

Leave a Reply

Your email address will not be published. Required fields are marked *

Back to top button