ವಿಧಾನ ಪರಿಷತ್ ಚುನಾವಣೆ ಸಲೀಂ ಅಹ್ಮದ್ ಪರವಾಗಿ ಕೆಪಿಸಿಸಿ ವೀಕ್ಷಕ ಟಿ. ಎಂ. ಶಹೀದ್ ತೆಕ್ಕಿಲ್ ರವರಿಂದ ಬಿರುಸಿನ ಪ್ರಚಾರ…

ಹಾವೇರಿ: ಹಾವೇರಿ ಜಿಲ್ಲಾ ವೀಕ್ಷಕ ಹಾಗೂ ಬ್ಯಾಡಗಿ ಉಸ್ತುವಾರಿ ಕೆಪಿಸಿಸಿಯ ಮಾಜಿ ಕಾರ್ಯದರ್ಶಿ ಟಿ. ಎಂ. ಶಹೀದ್ ತೆಕ್ಕಿಲ್ ಅವರು ಕಳೆದ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಕ್ರೀಯವಾಗಿ ಕೆಲಸ ಮಾಡಿ ಇದೀಗ ವಿಧಾನ ಪರಿಷತ್ ಚುನಾವಣೆಯಲ್ಲಿ ಗದಗ, ದಾರವಾಡ – ಹಾವೇರಿ ಜಿಲ್ಲೆಯ ಕಾಂಗ್ರೇಸ್ ಅಭ್ಯರ್ಥಿ ಸಲೀಂ ಅಹಮ್ಮದ್ ರವರ ಪರವಾಗಿ ಹಾವೇರಿ ಜಿಲ್ಲೆಯ ಬ್ಯಾಡಗಿಯ ಉಸ್ತುವಾರಿಯಾಗಿ ಪ್ರತೀ ಸ್ಥಳೀಯ ಸಂಸ್ಥೆಗಳ ಸದಸ್ಯರನ್ನು ಬೇಟಿಮಾಡಿ ಮತಯಾಚನೆ ನಡೆಸುತ್ತಿದ್ದಾರೆ.
ಅವರೊಂದಿಗೆ ಸುಳ್ಯ ಬ್ಲಾಕ್ ಕಾಂಗ್ರೇಸ್ ನ ಕಾರ್ಯದರ್ಶಿ ಸಿದ್ಧೀಕ್ ಕೊಕ್ಕೊ, ತಾಲೂಕು ಅಲ್ಪಸಂಖ್ಯಾತರ ಕಾಂಗ್ರೇಸ್ ಘಟಕದ ಉಪಾಧ್ಯಕ್ಷ ಹನೀಫ್ ಸೆಂಟಿಯಾರ್, ಅರಂತೋಡು ತಾಲೂಕು ಪಂಚಾಯತ್ ಕ್ಷೇತ್ರದ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ರಹೀಮ್ ಬೀಜದಕಟ್ಟೆ ಮೊದಲಾದವರಿದ್ದರು.
ಟಿ. ಎಂ. ಶಹೀದ್ ಅವರು ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಕೆಪಿಸಿಸಿಯ ವೀಕ್ಷಕರಾಗಿ ಸಮರ್ಪಕವಾಗಿ ಕಾರ್ಯನಿರ್ವಹಿಸಿದ್ದು. NSUI ಮತ್ತು ಯುವ ಕಾಂಗ್ರೇಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಉಡುಪಿ, ಹಾಸನ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಹುಬ್ಬಳ್ಳಿ, ಮಡಿಕೇರಿ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ಜಿಲ್ಲೆಗಳಲ್ಲಿ ನಡೆದ ಅನೇಕ ಪಕ್ಷದ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿರುತ್ತಾರೆ.
ಕೆಪಿಸಿಸಿಯ ಉಸ್ತುವಾರಿಯಾಗಿ ಹಾವೇರಿ ಜಿಲ್ಲೆಯ ಹಿರೆಕೆರೂರು ಮತ್ತು ಹಾನಗಲ್ , ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದ್ದರು. ಇದೀಗ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರ ಪರವಾಗಿ ಹಾವೇರಿ ಜಿಲ್ಲೆಯ ಬ್ಯಾಡಗಿ ಕ್ಷೇತ್ರದ ಉಸ್ತುವಾರಿಯಾಗಿರುತ್ತಾರೆ.

Sponsors

Related Articles

Back to top button