ಶುಕ್ರವಾರ – ದ.ಕ 180 ,ಉಡುಪಿ 190 ಹಾಗೂ ರಾಜ್ಯದಲ್ಲಿ 5007 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಶುಕ್ರವಾರ) ದ.ಕ ಜಿಲ್ಲೆಯಲ್ಲಿ 180 ,ಉಡುಪಿ ಜಿಲ್ಲೆಯಲ್ಲಿ 190 ಹಾಗೂ ರಾಜ್ಯದಲ್ಲಿ 5007 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು 180 ಕೋವಿಡ್–19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4389 ಕ್ಕೆ ಏರಿದೆ. ಇಂದು 239 ಮಂದಿ ಗುಣಮುಖರಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಇಂದು 190 ಮಂದಿಗೆ ಕೊರೊನ ಪಾಸಿಟಿವ್ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3036 ಕ್ಕೆ ಏರಿಕೆಯಾಗಿದೆ.ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2267 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 5007 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 85,870ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 50 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 110 ಮಂದಿ ಸಾವನ್ನಪ್ಪಿದ್ದಾರೆ.ಕಳೆದ 24 ಗಂಟೆಗಳಲ್ಲಿ 2037 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button