ಸವಣೂರಿನಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ….

ಪುತ್ತೂರು: ಮನುಷ್ಯ ಬದುಕಿನಲ್ಲಿ ಆರೋಗ್ಯವೇ ದೊಡ್ಡ ಸಂಪತ್ತಾಗಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಿಕೊಳ್ಳುವುದು ಅಗತ್ಯ. ಗ್ರಾಮೀಣ ಭಾಗದ ಜನತೆ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ಮೂಲಕ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ಮಂಗಳೂರು ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಆಡಳಿತ ನಿರ್ದೇಶಕ ಮತ್ತು ಅಧ್ಯಕ್ಷರಾದ ಡಾ. ಎ.ಜೆ.ಶೆಟ್ಟಿ ಹೇಳಿದರು.
ಅವರು ನ.24 ರಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಗಂಗೋತ್ರಿ ಆವರಣದಲ್ಲಿ ಮಂಗಳೂರಿನ ಎ.ಜೆ.ಶೆಟ್ಟಿ ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಆಶ್ರಯದಲ್ಲಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಈ ಭಾಗದ 10 ಗ್ರಾಮಗಳ ವ್ಯಾಪ್ತಿಯ ನಾಗರಿಕರ ಆರೋಗ್ಯ ರಕ್ಷಣೆಯ ಉದ್ದೇಶದಿಂದ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತಾನಡಿದರು.
ಎ.ಜೆ.ಕ್ಯಾನ್ಸರ್ ಸಂಸ್ಥೆ, ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಎ.ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಬೆಂಗಳೂರು, ಡಾ. ಬಿ.ಆರ್ ಶೆಟ್ಟಿ ಮತ್ತು ಸಿ.ಆರ್ ಶೆಟ್ಟಿ ಫೌಂಡೇಶನ್ ಮಾರ್ಗದರ್ಶನದಲ್ಲಿ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಸವಣೂರು, ಬೆಳಂದೂರು ಮತ್ತು ಕಾಣಿಯೂರು ಗ್ರಾ.ಪಂ.ಗಳು, ಪುತ್ತೂರು ಲಯನ್ಸ್ ಕ್ಲಬ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆ ಸವಣೂರು ವಲಯ, ಸವಣೂರು ಯುವಕ ಮಂಡಲ, ಸವಣೂರು ವರ್ತಕರ ಸಂಘ ಮತ್ತು ಸವಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಹಯೋಗದಲ್ಲಿ ಈ ಬೃಹತ್ ಶಿಬಿರ ಆಯೋಜಿಸಲಾಗಿತ್ತು.
ಅಧ್ಯಕ್ಷತೆ ವಹಿಸಿದ್ದ ಸುಳ್ಯ ಕ್ಷೇತ್ರದ ಶಾಸಕ ಎಸ್.ಅಂಗಾರ ಮಾತನಾಡಿ, ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ವಿವಿಧ ರೀತಿಯ ದಾನಗಳನ್ನು ಮಾಡುವುದರ ಹಿಂದಿನ ಮಹತ್ವನ್ನು ಅರಿಯುವ ಕೆಲಸವಾಗಬೇಕು. ಪ್ರಾಮಾಣಿಕತೆಯಿಂದ ಸೇವೆ ಮಾಡುವವರನ್ನು ಸಮಾಜ ಗುರುತಿಸಬೇಕು..ಸಮಾಜಮುಖಿ ಕಾರ್ಯಗಳಿಗೆ ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದರು. ಸೀತಾರಾಮ ರೈ ಸವಣೂರು ಅವರ ನೇತೃತ್ವದಲ್ಲಿ ಸವಣೂರು ಹಲವಾರು ರೀತಿಯಲ್ಲಿ ಬೆಳವಣಿಗೆ ಕಂಡಿದೆ,ಇಲ್ಲಿನ ಅಭಿವೃದ್ಧಿಯಲ್ಲಿ ಅವರ ಕೊಡುಗೆಗಳು ಅಪಾರ ಎಂದು ಅವರು ಪ್ರಶಂಸಿಸಿದರು.
ಮಂಗಳೂರು ಎ.ಜೆ.ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಸಂಸ್ಥೆಯ ಡೀನ್ ಡಾ. ಅಶೋಕ್ ಹೆಗ್ಡೆ ,ಮಂಗಳೂರು ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮೆಡಿಕಲ್ ಡೈರೆಕ್ಟರ್ ಡಾ.ಪ್ರಶಾಂತ್ ಮಾರ್ಲ, ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮೆಡಿಕಲ್ ಆಡಳಿತ ನಿರ್ದೇಶಕಿ ಡಾ.ಅಮಿತಾ ಪಿ ಮಾರ್ಲ, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿ.ಪಂ ಸದಸ್ಯೆ ಪ್ರಮೀಳಾ ಜನಾರ್ದನ್, ತಾ.ಪಂ ಉಪಾಧ್ಯಕ್ಷೆ ಲಲಿತಾ ಈಶ್ವರ್ ,ಪುತ್ತೂರು ಲಯನ್ಸ್ ಕ್ಲಬ್ ನಿರ್ದೇಶಕ ಡಾ.ಎ.ಕೆ.ರೈ, ಸವಣೂರು ಗ್ರಾಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಮಾಧವಿ ಕೋಡಂದೂರು, ಬೆಳಂದೂರು ಗ್ರಾ.ಪಂ.ಅಧ್ಯಕ್ಷೆ ಉಮೇಶ್ವರಿ ಅಗಳಿ, ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ,ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಪ್ರಿತ್ ರೈ ಖಂಡಿಗ, ವಿದ್ಯಾರಶ್ಮಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಸವಣೂರು ಯುವಕ ಮಂಡಲದ ಅಧ್ಯಕ್ಷ ತಾರಾನಾಥ ಪಿ, ಸವಣೂರು ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ.ಸವಣೂರು,ಪುತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕಿನಾರ,ಸವಣೂರು ವರ್ತಕರ ಸಂಘದ ಅಧ್ಯಕ್ಷ ರಫೀಕ್ ಅರ್ತಿಕೆರೆ,ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮೀ ಎಸ್ ರೈ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ಉಪಸ್ಥಿತರಿದ್ದರು.
ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಸ್ವಾಗತಿಸಿದರು. ಸವಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರ್ರಶೇಖರ್ ಪಿ ವಂದಿಸಿದರು. ವಿದ್ಯಾರಶ್ಮಿ ವಿದ್ಯಾಲಯದ ಉಪಪ್ರಾಂಶುಪಾಲೆ ಶಶಿಕಲಾ.ಎಸ್.ಆಳ್ವ ಕಾರ್ಯಕ್ರಮ ನಿರೂಪಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button