ಶನಿವಾರ – ದ.ಕ 61 ಹಾಗೂ ರಾಜ್ಯದಲ್ಲಿ 1522 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಶನಿವಾರ) ದ.ಕ ಜಿಲ್ಲೆಯಲ್ಲಿ 61 ಹಾಗೂ ರಾಜ್ಯದಲ್ಲಿ 1522 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 61 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 31848 ಕ್ಕೆ ಏರಿಕೆಯಾಗಿದೆ. ಇಂದು ಒಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೋನಾ ಸೋಂಕಿಗೆ ಒಟ್ಟು 713 ಮಂದಿ ಬಲಿಯಾಗಿದ್ದಾರೆ.ಇಂದು 44 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1522 ಮಂದಿಗೆ ಕೊರೋನ ಪಾಸಿಟಿವ್ ಪತ್ತೆಯಾಗಿವೆ . 2133 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಆಸ್ಟತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 846082 ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 24757 ಆಗಿದ್ದು, ಸೋಂಕಿನಿಂದ ಇಂದು 12 ಮಂದಿ ಮೃತಪಟ್ಟಿದ್ದಾರೆ. ಇಂದಿನವರೆಗೆ ಕೋವಿಡ್-19 ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 11750 ಆಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button