ಆದಿತ್ಯವಾರ – ದ.ಕ 17, ಉಡುಪಿ 13 , ಕಾಸರಗೋಡು 3 ಕೊರೊನಾ ಪಾಸಿಟಿವ್‌‌…

ಮಂಗಳೂರು: ಇಂದು (ಆದಿತ್ಯವಾರ) ದ.ಕ ಜಿಲ್ಲೆಯಲ್ಲಿ 17 , ಉಡುಪಿ ಜಿಲ್ಲೆಯಲ್ಲಿ 13 ಹಾಗೂ ಕಾಸರಗೋಡು ಜಿಲ್ಲೆಯಲ್ಲಿ 3 ಕೊರೊನಾ ಪಾಸಿಟಿವ್ ಕೊರೊನಾ ಪಾಸಿಟಿವ್‌‌ ಪ್ರಕರಣ ವರದಿಯಾಗಿದೆ.
ದ.ಕ. ಜಿಲ್ಲೆಯ ಎಲ್ಲಾ ಪ್ರಕರಣಗಳು ಮಹಾರಾಷ್ಟ್ರದಿಂದ ಮರಳಿದವರದ್ದಾಗಿದೆ. ಜಿಲ್ಲೆಯಲ್ಲಿ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 13 ಪಾಸಿಟಿವ್ ಪ್ರಕರಣಗಳಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಆಗಮಿಸಿದ್ದು, ಇನ್ನೂ ಒಬ್ಬ ವ್ಯಕ್ತಿಯ ಸೋಂಕಿನ ಮೂಲವನ್ನು ಕಂಡುಹಿಡಿಯಲಾಗಿಲ್ಲ.
ಕಾಸರಗೋಡು ಜಿಲ್ಲೆಯಲ್ಲಿ ಇಂದು ಮೂವರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಆರು ಮಂದಿ ಗುಣಮುಖರಾಗಿದ್ದಾರೆ. ರೆ.
ಕುವೈಟ್ ನಿಂದ ಆಗಮಿಸಿದ್ದ ಕಾಞಂಗಾಡ್ ನಗರಸಭಾ ವ್ಯಾಪ್ತಿಯ 38 ವರ್ಷದ, ಮಹಾರಾಷ್ಟ್ರದಿಂದ ಬಂದಿದ್ದ ಚೆರುವತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 33 ವರ್ಷದ, ಪುಲ್ಲೂರು-ಪೆರಿಯ ಗ್ರಾಮಪಂಚಾಯತ್ ವ್ಯಾಪ್ತಿಯ 63 ವರ್ಷದ ವ್ಯಕ್ತಿ ಸೋಂಕಿತರಾಗಿದ್ದಾರೆ. ಇವರೆಲ್ಲರೂ ಕ್ವಾರಂಟೈನ್ ನಲ್ಲಿದ್ದವರಾಗಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button