ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ…

ಸುಳ್ಯ: ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮ, ಸಡಗರದಿಂದ 76ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಧ್ವಜಾರೋಹಣಗೈದರು. ವಿದ್ಯಾರ್ಥಿಗಳ ಪಥ ಸಂಚಲನವು ವಿಶೇಷ ಆಕರ್ಷಣೆ ನೀಡಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕಲ್ಲುಗುಂಡಿ ಠಾಣೆಯ ಕಾನ್ಸ್ಟೇಬಲ್ ಮಧು ಜೆ ಡಿ, ಠಾಣಾ ಸಿಬ್ಬಂದಿ ನಾಗೇಶ್, ಸ್ಥಾಪಕಾಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ , ಗೌರವಾಧ್ಯಕ್ಷರಾದ ತಾಜ್ ಮಹಮ್ಮದ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿನಕರ ಸಣ್ಣಮನೆ, ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎಸ್ ಕೆ ಮಹಮ್ಮದ್ ಹನೀಫ್ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಉಮರ್ ಹಾಜಿ ,ಹಾರಿಸ್ ಗೂನಡ್ಕ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಸಂಪತ್ ಸ್ವಾಗತಿಸಿ, ಮೆಹೆಕ್ ನಾಝ್ ವಂದಿಸಿದರು. ಶಿಕ್ಷಕರಾದ ತಾಹಿರ ಮತ್ತು ತೌಶೀನ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ದೇಶ ಭಕ್ತಿಯನ್ನು ಸಾರುವ ಹಲವಾರು ಕಾರ್ಯಕ್ರಮಗಳು ಮೂಡಿ ಬಂದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

whatsapp image 2023 08 18 at 4.03.50 pm
whatsapp image 2023 08 18 at 4.04.18 pm
whatsapp image 2023 08 18 at 4.04.27 pm
Sponsors

Related Articles

Back to top button