ಯೆನೆಪೋಯ ಇಂಜಿನಿಯರಿಂಗ್ ಕಾಲೇಜು – ಉಚಿತ ಲ್ಯಾಪ್ ಟಾಪ್ ವಿತರಣಾ ಕಾರ್ಯಕ್ರಮ…

ಮೂಡುಬಿದ್ರಿ: ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯ ಮೊದಲ ವರ್ಷದ ಬಿ.ಇ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣಾ ಕಾರ್ಯಕ್ರಮ ಏ. 21 ರಂದು ನಡೆಯಿತು.
ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಲಿಕೆಗೆ ಅಗತ್ಯವಾದ ಅತ್ಯುತ್ತಮ ಸಂರಚನೆಯನ್ನು ಹೊಂದಿರುವ ಲೆನೊವೊ ಕಂಪೆನಿಯ ಲ್ಯಾಪ್‌ಟಾಪ್‌ಗಳನ್ನು ಕ್ಯಾಂಪಸ್ ಆಡಳಿತಾಧಿಕಾರಿ ಮೊಹಮ್ಮದ್ ಶಾಹಿದ್ ಅವರು ವಿದ್ಯಾರ್ಥಿಗಳಿಗೆ ವಿತರಿಸಿದರು. ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ತಮ್ಮ ಅಧ್ಯಯನದ ಸಮಯದಲ್ಲಿ ಲ್ಯಾಪ್‌ಟಾಪ್‌ಗಳನ್ನು ಪರಿಣಾಮಕಾರಿಯಾಗಿ ಬಳಸುವಂತೆ ಮತ್ತು ಕಾಲೇಜಿನ ಡಿಜಿಟಲ್ ಪಠ್ಯಕ್ರಮ ವಿತರಣಾ ಉದ್ದೇಶಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ.ಆರ್.ಜಿ. ಡಿಸೋಜಾ, ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.
ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿಗೆ ಪ್ರವೇಶ ಪಡೆದ ಬಿಇ ವಿದ್ಯಾರ್ಥಿಗಳಿಗೆ ಕಳೆದ ಹಲವು ವರ್ಷಗಳಿಂದ ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ. ಮಾತ್ರವಲ್ಲದೆ ಇಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ ಮತ್ತು ಆಪ್ಟಿಟ್ಯೂಡ್ ತರಬೇತಿ, ನಿಯಮಿತ ಶೈಕ್ಷಣಿಕ ಸಮಯದಲ್ಲಿ ಹೊಸ ಹೊಸ ತಂತ್ರಜ್ಞಾನಗಳಲ್ಲಿ ಆಡ್-ಆನ್ ಕಾರ್ಯಕ್ರಮಗಳು, ಜಾಗತಿಕ ಪ್ರಮಾಣೀಕರಣ ಕಾರ್ಯಕ್ರಮಗಳನ್ನೂ ಕಾಲೇಜಿನಲ್ಲಿ ಆಯೋಜಿಸಲಾಗುತ್ತಿದೆ.ನಿಯಮಿತ ಶೈಕ್ಷಣಿಕ ಕಾರ್ಯಕ್ರಮದೊಂದಿಗೆ ಪಠ್ಯೇತರ ಚಟುವಟಿಕೆಗಳಾದ NSS ಕಾರ್ಯಕ್ರಮಗಳು, ಕ್ರೀಡಾಕೂಟಗಳು, ಸಾಂಸ್ಕೃತಿಕ ಸ್ಪರ್ಧೆಗಳು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

Sponsors

Related Articles

Leave a Reply

Your email address will not be published. Required fields are marked *

Back to top button