ಸೋಮವಾರ – ದ.ಕ 144 , ಉಡುಪಿ 270 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಸೋಮವಾರ) ದ.ಕ ಜಿಲ್ಲೆಯಲ್ಲಿ 144 , ಉಡುಪಿ 270 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 144 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9022 ಕ್ಕೆ ಏರಿಕೆಯಾಗಿದೆ.ಇಂದು 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 277 ಕ್ಕೆ ಏರಿಕೆಯಾಗಿದೆ. ಇಂದು 209 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 2091 ಸಕ್ರಿಯ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯಲ್ಲಿ ಇಂದು 270 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8238 ಕ್ಕೆ ಏರಿಕೆಯಾಗಿದೆ. 114 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದ್ದರೆ, 62 ILI , 10 SARI ಪ್ರಕರಣವಾಗಿದೆ. ಇನ್ನೂ 83 ಮಂದಿಯ ಸೋಂಕಿನ ಮೂಲ ಪತ್ತೆಯಾಗಬೇಕಿದೆ. ಇಂದು ಉಡುಪಿಯಲ್ಲಿ 107, ಕುಂದಾಪುರದಲ್ಲಿ 141, ಕಾರ್ಕಳ ತಾಲ್ಲೂಕಿನಲ್ಲಿ 15 ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ಇಂದು 6317 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 7071 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.ಕೋವಿಡ್-19 ಸೋಂಕಿನಿಂದ ಇಂದು 115 ಜನರು ಸೇರಿದಂತೆ ಈವರೆಗೂ ಒಟ್ಟಾರೇ 4062 ರೋಗಿಗಳು ಮೃತಪಟ್ಟಿದ್ದಾರೆ. 80,643 ಸಕ್ರಿಯ ಪ್ರಕರಣಗಳಾಗಿದ್ದು,ಒಟ್ಟು ಪ್ರಕರಣಗಳ ಸಂಖ್ಯೆ 2,33, 283ಕ್ಕೆ ಏರಿಕೆಯಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button