ಬಾಲಿವುಡ್ ಹಿರಿಯ ನಟ ರಿಷಿಕಪೂರ್ ನಿಧನ….

ಮುಂಬೈ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್(67 ) ಮುಂಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
2018ರಲ್ಲಿ ಕ್ಯಾನ್ಸರ್ ಗೆ ತುತ್ತಾಗಿದ್ದ ಇವರು ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ಉಸಿರಾಟದ ಸಮಸ್ಯೆ ಕಂಡುಬಂದಿದ್ದರಿಂದ ಮುಂಬೈನ ಸರ್ ಹೆಚ್. ಎನ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ನಿಧನರಾಗಿದ್ದಾರೆ. ರಿಷಿ ಕಪೂರ್​ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button