ವಿಧಾನ ಪರಿಷತ್ ಚುನಾವಣೆ- ಹಾವೇರಿ ಜಿಲ್ಲೆಯ ಉಸ್ತುವಾರಿಯಾಗಿ ಕಾಂಗ್ರೇಸ್ ಮುಖಂಡ ಟಿ. ಎಂ. ಶಹೀದ್ ತೆಕ್ಕಿಲ್ ನೇಮಕ…

ಬೆಂಗಳೂರು: ಹಾವೇರಿ ಜಿಲ್ಲೆಯ ಉಸ್ತುವಾರಿಯಾಗಿ ನೇಮಕಗೊಂಡಿರುವ ಕಾಂಗ್ರೇಸ್ ಮುಖಂಡ ಟಿ. ಎಂ. ಶಹೀದ್ ತೆಕ್ಕಿಲ್ ಅವರು ಗದಗ, ಹಾವೇರಿ,ದಾರವಾಡ ಜಿಲ್ಲೆಗಳನ್ನು ಒಳಗೊಂಡ ಸ್ಥಳೀಯ ಸಂಸ್ಥೆಯಿoದ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಸ್ಪರ್ಧಿಸುತ್ತಿರುವ ಹಾವೇರಿ ಜಿಲ್ಲೆಯ ಬ್ಯಾಡಗಿ ವಿಧಾನಸಭಾ ಕ್ಷೇತ್ರದಿಂದ ಕಾರ್ಯನಿರ್ವಹಿಸುತ್ತಾರೆ.
ಟಿ. ಎಂ. ಶಹೀದ್ ತೆಕ್ಕಿಲ್ NSUI ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೇಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅಲ್ಪ ಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾರ್ಯದರ್ಶಿಯಾಗಿ ಹಾಗೂ ಹಿರೆಕೆರೂರು, ಬ್ಯಾಡಗಿ ಹಾನಗಲ್ ಹಾಗೂ ವಿರಾಜಪೇಟೆ, ವಿಧಾನಸಭಾ ಕ್ಷೇತ್ರದ ಕೆಪಿಸಿಸಿಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ. NSUI ಯುವ ಕಾಂಗ್ರೇಸ್ , ಅಲ್ಪ ಸಂಖ್ಯಾತ ಘಟಕದ ಮತ್ತು ಕೆಪಿಸಿಸಿಯ ಕಾರ್ಯದರ್ಶಿಯಾಗಿ ರಾಜ್ಯದ ವಿವಿಧ ಭಾಗದಲ್ಲಿ ವೀಕ್ಷಕರಾಗಿ ಕೆಲಸ ನಿರ್ವಹಿಸಿರುತ್ತಾರೆ.
ಟಿ. ಎಂ. ಶಹೀದ್ ರವರು ಎರಡು ಬಾರಿ ಸುಳ್ಯ ಕೆವಿಜಿ ಕಾನೂನು ಕಾಲೇಜಿನ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸೆನೆಟ್ ಆಯ್ಕೆ ಸಮಿತಿ ಸದಸ್ಯರಾಗಿ, ಕೆವಿಜಿ ಕಾನೂನು ಕಾಲೇಜಿನ ವಿದ್ಯಾರ್ಥಿ ಯೂನಿಯನ್ ನ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ವಿಶ್ವವಿದ್ಯಾನಿಲಯ ¸ಸರ್ವ ಕಾಲೇಜು ವಿದ್ಯಾರ್ಥಿ ಯೂನಿಯನ್ ನ ಉಪಾಧ್ಯಕ್ಷರಾಗಿ, ರಾಜೀವ್ ಗಾಂಧಿ ಯುವ ಶಕ್ತಿ ಮತ್ತು ಗ್ರಾಮೀಣಾಭಿವೃದ್ಧಿ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.
ಸುಳ್ಯ ತಾಲೂಕು ಅಲ್ಪ ಸಂಖ್ಯಾತರ ವಿವಿದ್ದೋದೇಶ ಸಹಕಾರಿ ಸಂಘದಲ್ಲಿ ಏಳುವರೆ ವರ್ಷಗಳ ಕಾಲ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರುಮಂಡಳಿ ಸದಸ್ಯರಾಗಿ ಪ್ರಸ್ತುತ ಕರ್ನಾಟಕ ರಾಜ್ಯದ ರಾಜೀವ್ ಯೂತ್ ಫೌಂಡೇಶನ್ ನ ಅಧ್ಯಕ್ಷರಾಗಿ, ಸಂಪಾಜೆ ಗ್ರಾಮದ ಪೇರಡ್ಕ- ಗೂನಡ್ಕ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಹಾಗೂ ಪ್ರಸ್ತುತ ಗೌರವಾಧ್ಯಕ್ಷರಾಗಿ, ಅರಂತೋಡು AHYA ಇದರ ಗೌರವಾಧ್ಯಕ್ಷರಾಗಿ 20 ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದಾರೆ.
ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ) ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿ, ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ. ಕಳೆದ 3 ದಶಕಗಳಿಂದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ, ಸಹಕಾರಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರುವ ಇವರು ಗ್ರಾಮ ಮಟ್ಟದಿಂದ ತೊಡಗಿ ರಾಷ್ಟ್ರ ರಾಜಧಾನಿಯವರೆಗೆ ಸೇವಾವಲಯವನ್ನು ವಿಸ್ತರಿಸಿಕೊಂಡವರಾಗಿದ್ದಾರೆ.

Sponsors

Related Articles

Back to top button