ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು -ವಿಶ್ವ ಪರಿಸರ ದಿನಾಚರಣೆ…

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗ, ಐಎಸ್‍ಟಿಇ ನವದೆಹಲಿ ಮತ್ತು ಭಾರತ ಸರ್ಕಾರದ ಉನ್ನತ್ ಭಾರತ ಅಭಿಯಾನ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನು ಕಾಲೇಜಿನಲ್ಲಿ ಆಚರಿಸಲಾಯಿತು.
ಕಾಲೇಜಿನ ಆವರಣದಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕರಾದ ರವಿಕೃಷ್ಣ.ಡಿ.ಕಲ್ಲಾಜೆ ಹಾಗೂ ಸುಬ್ರಮಣ್ಯ ಭಟ್.ಟಿ.ಎಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಲ್ಲರೂ ಒಂದೊಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಪ್ರತಿಜ್ಞೆಯನ್ನು ಕೈಗೊಳ್ಳಬೇಕು. ಇದರಿಂದ ನೆಲ ಜಲದ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದರು. ಪರಿಸರದ ನಾಶವು ಹೆಚ್ಚಾದಂತೆ ಪ್ರಕೃತಿಯ ಮುನಿಸು ಹೆಚ್ಚುತ್ತದೆ ಇದರಿಂದ ಮಾನವನ ಜೀವನ ದುರ್ಭರವಾಗುತ್ತದೆ ಎಂದರು.
ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಮಾತನಾಡಿ ಪರಿಸರದ ಸಂರಕ್ಷಣೆಗೆ ಕಾಲೇಜು ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಸುತ್ತ ಮುತ್ತಲ ಗ್ರಾಮಗಳಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದರು.
ಕಾಲೇಜಿನ ಆವರಣದಲ್ಲಿ ಅನೇಕ ಔಷಧೀಯ ಸಸ್ಯಗಳನ್ನು ಈ ಸಂದರ್ಭದಲ್ಲಿ ನೆಡಲಾಯಿತು.ಕ್ಯಾಂಪಸ್ ನಿರ್ದೇಶಕ ವಿವೇಕ್ ರಂಜನ್ ಭಂಡಾರಿ, ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ.ಸಂದೀಪ್.ಜೆ.ನಾಯಕ್, ಇತರ ವಿಭಾಗಗಳ ಮುಖ್ಯಸ್ಥರು ಉಪನ್ಯಾಸಕರು ಹಾಜರಿದ್ದರು.
ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಅಂತರದೊಂದಿಗೆ ಸಮಾರಂಭವನ್ನು ನಡೆಸಲಾಯಿತು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರೊ.ಸುಮಂತ್ ಸ್ವಾಗತಿಸಿ, ಪ್ರೊ.ಸೌಮ್ಯ.ಜಿ.ಎಂ ವಂದಿಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button