ಸುದ್ದಿ

ಅಧ್ಯಯನ ತಂತ್ರ ಮತ್ತು ಪರೀಕ್ಷಾ ಸಿದ್ಧತಾ ತರಬೇತಿ ಕಾರ್ಯಕ್ರಮ….

ಪುತ್ತೂರು:ವಿದ್ಯಾರ್ಥಿಗಳು ಏಕಾಗ್ರತೆಯಿಂದ ಅಧ್ಯಯನ ಮಾಡಿ ಪರೀಕ್ಷೆಗೆ ಪೂರ್ವಸಿದ್ಧತೆ ಮಾಡುವ ಮೂಲಕ ಹೆಚ್ಚು ಅಂಕಗಳನ್ನು ಪಡೆಯಲು ಸಾಧ್ಯವಿದೆ. ಸಮಯದ ಸದುಪಯೋಗವನ್ನುಮಾಡಿಕೊಂಡು ಪರೀಕ್ಷೆಯಲ್ಲಿ ಆತ್ಮವಿಶ್ವಾಸದಿಂದ ಉತ್ತರಿಸಿ ಯಶಸ್ವಿಯಾಗಬಹುದು ಎಂದು ಜೆಸಿಐ ರಾಜ್ಯ ತರಬೇತುದಾರ ಜಯಾನಂದ ಪೆರಾಜೆ ಹೇಳಿದರು.
ಅವರು ಸರಕಾರಿ ಪದವಿಪೂರ್ವ ಕಾಲೇಜು ಕಬಕದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅಧ್ಯಯನ ತಂತ್ರ ಮತ್ತು ಪರೀಕ್ಷಾ ಸಿದ್ಧತಾ ತರಬೇತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶಾಲಾ ಕನ್ನಡ ಭಾಷಾ ಶಿಕ್ಷಕಿ ಶಾಂತ ಪ್ರಸ್ತಾವನೆಗೈದು ತರಬೇತಿಯನ್ನು ಉದ್ಘಾಟಿಸಿದರು. ಪ್ರಭಾರ ಮುಖ್ಯ ಶಿಕ್ಷಕಿ ರೇಖಾ , ಶಿಕ್ಷಕರಾದ ಸತ್ಯಶಂಕರ್, ಕೃಷ್ಣಯ್ಯ ಕೆ. ವಿದ್ಯಾರ್ಥಿ ನಾಯಕಿ ಸಾನಿಯಾ ಉಪಸ್ಥಿತರಿದ್ದರು.

Related Articles

Leave a Reply

Your email address will not be published.

Back to top button