Jannah Theme License is not validated, Go to the theme options page to validate the license, You need a single license for each domain name.
ಸುದ್ದಿ

ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ ನೇಮಕ….

ಪುತ್ತೂರು: ನೂತನ ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ, ಧಾರ್ಮಿಕ, ಸಾಮಾಜಿಕ ಹಾಗೂ ಸಾಹಿತ್ಯಿಕ ಕ್ಷೇತ್ರದಲ್ಲಿ ಸಕ್ರಿಯರೂ ಆಗಿರುವ ಪಿ. ಜನಾರ್ದನ ಗೌಡ ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನಾರ್ದನ ಗೌಡ ಅವರು ಕಡಬ ತಾಲೂಕಿನ ವಿವಿಧ ಶಾಲೆಗಳಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ ಮುಖ್ಯೋಪಧ್ಯಾಯರಾಗಿ ಪದೋನ್ನತಿ ಹೊಂದಿ ನಿವೃತ್ತರಾದರು. ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದ ಜನಾರ್ದನ ಗೌಡರು ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿರುವರು. ಈ ಹಿಂದೆ ಜರಗಿದ್ದ ಪುತ್ತೂರು ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯದರ್ಶಿಯಾಗಿ ಹಾಗೂ ಪುತ್ತೂರು ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಗೌರವಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿರುವ ಜನಾರ್ದನ ಗೌಡರನ್ನು ಕಡಬ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಪ್ರದೀಪ್ ಕುಮಾರ್ ಕಲ್ಕೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button