ಕರಾವಳಿ ಭದ್ರತಾ ಪಡೆಗೆ ಹೆಚ್ಚಿನ ಸೌಲಭ್ಯ ನೀಡಲು ರಾಜ್ಯ ಗೃಹ ಇಲಾಖೆ – ಗೃಹ ಸಚಿವ ಬಸವರಾಜ ಬೊಮ್ಮಾಯಿ….
ಬಂಟ್ವಾಳ: ಕರಾವಳಿ ಭದ್ರತಾ ಪಡೆಯನ್ನು ಬಲವರ್ಧನೆಗೊಳಿಸುವುದಕ್ಕಾಗಿ ಹೆಚ್ಚಿನ ಸೌಲಭ್ಯ ನೀಡುವುದಕ್ಕೆ ರಾಜ್ಯ ಗೃಹ ಇಲಾಖೆ ತೀರ್ಮಾನಿಸಿದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅವರು ಅ. 24 ರಂದು ಬಂಟ್ವಾಳ ನಿರೀಕ್ಷಣಾ ಮಂದಿರದಲ್ಲಿ ಪಶ್ಚಿಮ ವಲಯದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಕರ್ತರ ಜತೆ ಮಾತನಾಡಿದರು.
ದ.ಕ.ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವ ಕುರಿತು ಶೀಘ್ರ ಬೆಂಗಳೂರಿನಲ್ಲಿ ಸಭೆ ಕರೆಯಲಾಗುತ್ತದೆ, ಬಂಟ್ವಾಳ ಪೊಲೀಸ್ ಠಾಣೆಯನ್ನು ಮೇಲ್ದರ್ಜೆಗೇರಿಸುವ ವಿಚಾರ ತನ್ನ ಗಮನಕ್ಕೆ ಬಂದಿದ್ದು ಅದರ ಕುರಿತು ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಪೊಲೀಸ್ ಅಧಿಕಾರಿಗಳು, ಬಿಜೆಪಿ ನಾಯಕರು ಉಪಸ್ಥಿತರಿದ್ದರು.