ಸುದ್ದಿ

ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌ ಇಂದು ಸಂಜೆ ನಿರ್ಧಾರ – ಸಿಎಂ ಯಡಿಯೂರಪ್ಪ…

ಬೆಂಗಳೂರು: ರಾಜ್ಯಾದ್ಯಂತ ಲಾಕ್‌ಡೌನ್ ಸೇರಿದಂತೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ವಿಪಕ್ಷಗಳೊಂದಿಗೆ ಚರ್ಚಿಸಿ ಇಂದು ಸಂಜೆ ತೀರ್ಮಾನ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಡವರ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ದಿನವಿಡೀ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗುವುದು . ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸದ್ಯ ಕ್ವಾರಂಟೈನ್‌ನಲ್ಲಿ ಇಡುವುದು ಸವಾಲಿನ ಕೆಲಸವಾಗುತ್ತಿದೆ. ರಾಜ್ಯದಲ್ಲಿ 30 ಫೀವರ್‌ ಕ್ಲಿನಿಕ್‌ ಆರಂಭ ಮಾಡಲಾಗುವುದು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ 100 ಬೆಡ್‌ಗಳನ್ನು ಕೊರೊನಾ ಚಿಕಿತ್ಸೆಗೆಂದೇ ವ್ಯವಸ್ಥೆ ಮಾಡಲಾಗುತ್ತದೆ ಎಂದ ಅವರು ನಗರ ಪ್ರದೇಶಗಳಲ್ಲಿರುವ ಜನರು ಹಳ್ಳಿಗಳಿಗೆ ಹೋಗಬಾರದು. ಕೊರೊನಾ ಸೋಂಕನ್ನು ಗಂಭೀರವಾಗಿ ಪರಿಗಣಿಸಿ ಜನತೆ ಮನೆಯಿಂದ ಹೊರಗಡೆ ಬರಬಾರದು ಎಂದು ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button