ಸುದ್ದಿ
ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗ ರಾಜ್ಯಾಧ್ಯಕ್ಷ, ಎಐಸಿಸಿ ಸಂಯೋಜಕಿ ಯವರಿಗೆ ಕೆ. ಎಂ. ಮುಸ್ತಾಫ ರಿಂದ ಸನ್ಮಾನ…

ಮಂಗಳೂರು: ಎರಡು ದಿನಗಳ ದ.ಕ.ಮತ್ತು ಉಡುಪಿ ಜಿಲ್ಲಾ ಪ್ರವಾಸ ಕ್ಕೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ, ವಿಧಾನ ಪರಿಷತ್ ಸದಸ್ಯರು ಆದ ಅಬ್ದುಲ್ ಜಬ್ಬಾರ್ ಸಾಹೇಬ್ ಹಾಗೂ ಎಐಸಿಸಿ ರಾಷ್ಟ್ರೀಯ ಸಂಯೋಜಕಿ, ರಾಜ್ಯ ಉಸ್ತುವಾರಿ ಜೀನನ್ ಪಿ ಗಾಲಾ ಇವರುಗಳನ್ನು ಮಂಗಳೂರಿನಲ್ಲಿ ನಡೆದ ಚಿಂತನಾ ಸಭೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ ಸನ್ಮಾನಿಸಿದರು
ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆ ವಿಪಕ್ಷ ಉಪ ನಾಯಕ ಯು. ಟಿ. ಖಾದರ್, ಮಾಜಿ ಶಾಸಕರು ಗಳಾದ ಮೊಯಿದಿನ್ ಬಾವ, ಐವನ್ ಡಿ ‘ಸೋಜಾ, ಜಿಲ್ಲಾ ಅಲ್ಪಸಂಖ್ಯಾತರ ವಿಭಾಗ ಅಧ್ಯಕ್ಷ ಶಾಹುಲ್ ಹಮೀದ್,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮೂಲ್ಕಿ ಮೊದಲಾದವರು ಉಪಸ್ಥಿತರಿದ್ದರು.

Advertisement