ಸುದ್ದಿ

ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರರಾಗಿ ಟಿ. ಎಂ ಶಾಹಿದ್ ತೆಕ್ಕಿಲ್ ನೇಮಕ…

ಬೆಂಗಳೂರು: ಚುನಾವಣೆಯ ಹಿತದೃಷ್ಟಿಯಿಂದ ಪಕ್ಷದ ಪರವಾಗಿ ಸಮರ್ಥವಾಗಿ ಮಾಧ್ಯಮದ ಮುಖಾಂತರ ಜನರಿಗೆ ಸಂದೇಶ ಮುಟ್ಟಿಸಲು ಕೆಪಿಸಿಸಿ ಅಧ್ಯಕ್ಷರಾದ ಶ್ರೀ. ಡಿ. ಕೆ. ಶಿವಕುಮಾರ್ ಆದೇಶದ ಮೇರೆಗೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾದ ಪ್ರಿಯಾಂಕ ಖರ್ಗೆ ಯವರು ಟಿ.ಎಂ ಶಾಹೀದ್ ತೆಕ್ಕಿಲ್ ರವರನ್ನು ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರರಾಗಿ ನೇಮಕ ಗೊಳಿಸಿದ್ದಾರೆ. ಪ್ರಸ್ತುತ ಕೆಪಿಸಿಸಿ ಬೆಳ್ತಂಗಡಿ ಉಸ್ತುವಾರಿ ವಹಿಸಿರುವ ಟಿ. ಎಂ ಶಾಹಿದ್ ತೆಕ್ಕಿಲ್ ರವರು ಸುಳ್ಯ ತಾಲೂಕು ಎನ್. ಎಸ್.ಯು.ಐ ನ ಪ್ರಧಾನ ಕಾರ್ಯದರ್ಶಿಯಾಗಿ, ಜಿಲ್ಲಾ ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ರಾಜ್ಯ ಎಸ್ ಯು ಐ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಯುವ ಕಾಂಗ್ರೇಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಯಾಗಿ ಹಾಗೂ ಹಾವೇರಿ ಜಿಲ್ಲೆಯ ಹಿರೆಕೆರೂರು ಮತ್ತು ಕೊಡಗು ಜೆಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕೆ.ಪಿ.ಸಿ.ಸಿ.ಯ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಕೆಪಿಸಿಸಿ ಕೊಡಗು ಜಿಲ್ಲಾ ಸದಸ್ಯ ನೋಂದಣಿಯ ಉಸ್ತುವಾರಿಯಾಗಿದ್ದ ಅವರು ಸದಸ್ಯತ್ವ ನೋಂದಣಿ ಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತು ದ ಕ ಜಿಲ್ಲೆಯಲ್ಲಿ ಗರಿಷ್ಠ ಸದಸ್ಯರನ್ನ ನೋಂದಾಯಿಸಿದ್ದಾರೆ. ಪಕ್ಷದ ಸಾಂಸ್ಥಿಕ ಚುನಾವಣೆಯ ಮಲಪ್ಪುರಂ ಜಿಲ್ಲೆಯ ಚುನಾವಣಾಧಿಕಾರಿಯಾಗಿ ಕೂಡ ಅವರು ಸೇವೆ ಸಲ್ಲಿಸಿದ್ದಾರೆ. 2001ರಲ್ಲಿ ರಾಜ್ಯ ಯುವ ಪ್ರಶಸ್ತಿಗೆ ಪಡೆದ ಇವರು ಸುಳ್ಯ ಅಲ್ಪಸಂಖ್ಯಾತರ ಸಹಕಾರಿ ಸಂಘದಲ್ಲಿ ಮೂರು ಬಾರಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ, ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರುಮಂಡಳಿ ಸದ್ಯರಾಗಿ, ರಾಜ್ಯದ ರಾಜೀವ್ ಯೂತ್ ಪೌಂಡೇಶನ್ ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.
ಪ್ರಸ್ತುತ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ, ಸಂಪಾಜೆ ಗೂನಡ್ಕ ತೆಕ್ಕಿಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಹಲವಾರು ಸಾಮಾಜಿಕ, ರಾಜಕೀಯ, ಧಾರ್ಮಿಕ, ಕ್ರೀಡಾ, ಸಹಕಾರ, ಕೃಷಿ, ಉದ್ಯಮ ಕ್ಷೇತ್ರದಲ್ಲಿ ದುಡಿಯುತ್ತಿರುವ ಟಿ ಎಂ ಶಾಹಿದ್ ಅವರು ಪ್ರತಿಷ್ಠಿತ ತೆಕ್ಕಿಲ್ ಮನೆತನದವರು.

Advertisement

Related Articles

Back to top button