Jannah Theme License is not validated, Go to the theme options page to validate the license, You need a single license for each domain name.
ಸುದ್ದಿ

ಚುನಾವಣೆಯಲ್ಲಿ ಸೋಲು-ರಾಜೀನಾಮೆಗೆ ಕಾರಣ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಪಿ ರೈ…..

ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜಿನಾಮೆಯನ್ನು ಅಂಗೀಕರಿಸಿ ಬ್ಲಾಕ್ ಗೆ ನೂತನ ಅಧ್ಯಕ್ಷರನ್ನು ತಕ್ಷಣ ನೇಮಕ ಮಾಡಬೇಕು ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯನ್.ಜಯಪ್ರಕಾಶ್ ರೈ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದ್ದಾರೆ.

ವಿದೇಶ ಪ್ರವಾಸದ ಕಾರಣ ಕೆಲ ತಿಂಗಳ ಹಿಂದೆ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯನ್ನು ನೀಡಿದ್ದೆ. ಉತ್ತಮ ಕೆಲಸ‌ ಮಾಡಿದ್ದರೂ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದೇ ಇದ್ದುದು ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಕಾರಣವಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯುವುದಿಲ್ಲ. ಹೊಸ ಅಧ್ಯಕ್ಷರ ನೇಮಕ ಆಗುವ ತನಕ ಅಧ್ಯಕ್ಷರ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಕೂಡಲೇ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಹೊಸಬರಿಗೆ ಅವಕಾಶ ನೀಡಬೇಕು. ಬ್ಲಾಕ್ ಅಧ್ಯಕ್ಷತೆ ಹೊರತುಪಡಿಸಿ ಪಕ್ಷ ನೀಡುವ ಯಾವುದೇ ಹುದ್ದೆಯನ್ನೂ ನಿಭಾಯಿಸಲು ಸಿದ್ಧ ಎಂದೂ ಅವರು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button