ಸುದ್ದಿ

ಟಿ. ಎಂ. ಶಾಹಿದ್ ತೆಕ್ಕಿಲ್ ಅವರಿಗೆ ಸನ್ಮಾನ….

ಸುಳ್ಯ:ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಶತಮಾನೋತ್ಸವ ಸಂಭ್ರಮ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಲ್ಲಿ ರಾಜಕೀಯ ಕ್ಷೇತ್ರದಲ್ಲಿ ಉನ್ನತ ಹುದ್ದೆಗೇರಿದ ಶಾಲಾ ಹಿರಿಯ ವಿದ್ಯಾರ್ಥಿ ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ. ಎಂ. ಶಾಹೀದ್ ಅವರನ್ನು ಸಾಫ್ಟ್ ವೇರ್ ಉದ್ಯಮಿ ಆನಂದ ಕಲ್ಲುಗದ್ದೆ ಇವರು ಸನ್ಮಾನಿಸಿದರು.
ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ , ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ತಾಲೂಕು ಪಂಚಾಯತ್ ಸದಸ್ಯೆ ಪುಷ್ಪ ಮೇದಪ್ಪ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ | ಕೆ. ವಿ. ಚಿದಾನಂದ, ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಅರಂತೋಡುಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ಕೋಡಂಕೇರಿ, ಶತಮಾನೋತ್ಸವ ಸಮಿತಿ ಅಧ್ಯಕ್ಷ ತೀರ್ಥರಾಮ ಅಡ್ಕಬಳೆ, ಕಾರ್ಯದರ್ಶಿ ಶೇಷಗಿರಿ, ಬೊಳ್ಳೂರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪದ್ಮಯ್ಯ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button