Jannah Theme License is not validated, Go to the theme options page to validate the license, You need a single license for each domain name.
ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ…….

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೆ.6 ರಂದು ತಮ್ಮ ಸೇವೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಇಂಜಿನಿಯರಿಂಗ್ ಪದವೀಧರರಾದ ಸಸಿಕಾಂತ್ ಸೆಂಥಿಲ್ ಅವರು ತಮಿಳುನಾಡಿನವರು. 2009 ರ ಸಾಲಿನ ಐಎಎಸ್ ಬ್ಯಾಚಿನವರಾದ ಸೆಂಥಿಲ್ ಅವರು ಈ ಹಿಂದೆ ಬಳ್ಳಾರಿಯ ಎಸಿಯಾಗಿ, ಶಿವಮೊಗ್ಗ ಜಿಲ್ಲಾ ಪಂಚಾಯತಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹಾಗೂ ರಾಯಚೂರು ಜಿಲ್ಲಾಧಿಕಾರಿಯಾಗಿದ್ದರು. ಸಸಿಕಾಂತ್ ಸೆಂಥಿಲ್ ಅವರು 2017 ರಿಂದ ದ.ಕ ಜಿಲ್ಲಾಧಿಕಾರಿಗಳಾಗಿದ್ದರು. ಕಳೆದ ವರ್ಷ ಹಾಗೂ ಈ ವರ್ಷದ ಭಾರೀ ಮಳೆ-ಪ್ರವಾಹ, ಮರಳು ಮಾಫಿಯಾ ಮುಂತಾದ ಹಲವಾರು ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸಿದ ಅವರು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button