ಸುದ್ದಿ

ದ. ಕ – ಇಂದು ಮೂರು ಕೊರೋನಾ ಪಾಸಿಟಿವ್ ಕೇಸ್….

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮೂರು ಮಂದಿಯಲ್ಲಿ ಕೊರೋನಾ ಪರೀಕ್ಷಾ ವರದಿ ಪಾಸಿಟಿವ್ ಆಗಿದೆ.

ರೋಗಿ ಸಂಖ್ಯೆ p -578 ರ ಸಂಪರ್ಕದಲ್ಲಿದ್ದ ಬಂಟ್ವಾಳದ 30 ವರ್ಷದ ಯುವಕ, 70 ಮತ್ತು 60 ವರ್ಷದ ಮಹಿಳೆಯ ಗಂಟಲು ದ್ರವ ಪರೀಕ್ಷೆ ವರದಿ ಸ್ವೀಕೃತವಾಗಿದ್ದು, ಇವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿರುತ್ತದೆ. ಇವರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇವರೆಲ್ಲರೂ ಬಂಟ್ವಾಳ ಕಸಬಾ ಗ್ರಾಮದ ಒಂದೇ ಕುಟುಂಬದವರಾಗಿರುತ್ತಾರೆ ಎಂದು ದಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ದ.ಕ ಜಿಲ್ಲೆಯಲ್ಲಿ ಈವರೆಗೂ 31 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಆ ಪೈಕಿ ಪ್ರಸ್ತುತ 15 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ 3 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

Related Articles

Leave a Reply

Your email address will not be published.

Back to top button