ಸುದ್ದಿ

ದ.ಕ. ಜಿಲ್ಲಾಧಿಕಾರಿ ರಾಜೀನಾಮೆ ವಿಚಾರದಲ್ಲಿ ಕಾಂಗ್ರೆಸ್ ನಿಂದ ಕೀಳು ರಾಜಕೀಯ- ವೇದವ್ಯಾಸ್ ಕಾಮತ್….

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ರಾಜೀನಾಮೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ದಕ್ಷ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರ ರಾಜಿನಾಮೆ ಸಂದರ್ಭದಲ್ಲಿ ಮೌನವಹಿಸಿದ್ದ ಕಾಂಗ್ರೆಸ್ ಈಗ ಯಾಕೆ ಪ್ರತಿಭಟನೆ ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಿರ್ಣಯ ಬದಲಿಸಲು ಕರೆ ಬಂದಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕೂಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಬಳಿ ಮಾತನಾಡುವುದಾಗಿಯೂ ತಿಳಿಸಿದ್ದಾರೆ. ಮಾತ್ರವಲ್ಲ, ಅವರು ಈಗಾಗಲೇ ಬರೆದಿರುವ ಪತ್ರದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು,ಸರ್ಕಾರ ರಾಜೀನಾಮೆಗೆ ಹೊಣೆಯಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷ ಈ ವಿಚಾರವನ್ನು ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button