Jannah Theme License is not validated, Go to the theme options page to validate the license, You need a single license for each domain name.
ಸುದ್ದಿ

ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆಗೆ ಬಿಜೆಪಿ ಕಾರಣ: ಕಾಂಗ್ರೆಸ್ ಆರೋಪ….

ಮಂಗಳೂರು:ದ.ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ರಾಜೀನಾಮೆಗೆ ಸಂಬಂಧಪಟ್ಟಂತೆ ಜಿಲ್ಲಾ ಕಾಂಗ್ರೆಸ್ ಸೆ.6ರೆಂದು ಪ್ರತಿಭಟನೆ ನಡೆಸಿತು. ಈ ಸಂಧರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ, ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ತಮಗೆ ಸಂಬಂಧಿಸಿದವರಿಗೆ ಮರಳು ದಂಧೆಗೆ ಅವಕಾಶ ನೀಡಬೇಕೆಂದು ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ . ಕಾರಣವಿಲ್ಲದೇ ರಾಜೀನಾಮೆ ನೀಡುವಂತಹ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅಲ್ಲ ಎಂದಿದ್ದಾರೆ.ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ಬಿಜೆಪಿ ಸರ್ಕಾರದಿಂದ ಐಎಎಸ್ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದ್ದು, ಇದೇ ಒತ್ತಡದಿಂದ ಸಸಿಕಾಂತ್ ಸೆಂಥಿಲ್ ರಾಜೀನಾಮೆ ಸಲ್ಲಿಸಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಅಧಿಕಾರಿಗಳು ಮಾತ್ರವಲ್ಲ ಕೆಳವರ್ಗದ ನೌಕರರು ರಾಜೀನಾಮೆ ನೀಡುವ ಪರಿಸ್ಥಿತಿ ಬರಲಿದೆ ಎಂದು ಆರೋಪಿಸಿದರು.

Related Articles

Leave a Reply

Your email address will not be published. Required fields are marked *

Back to top button