ಸುದ್ದಿ

ದ.ಕ ಜಿಲ್ಲೆಯಾದ್ಯಂತ ಪಾನ್ ಮಸಾಲ ಮಾರಾಟ, ಸೇವನೆ ನಿಷೇಧ….

ಮಂಗಳೂರು:ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ದ.ಕ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೂ ಪಾನ್ ಮಸಾಲ, ಜರ್ದಾ, ಖೈನಿ,ಮುಂತಾದ ಜಗಿಯುವ ತಂಬಾಕು ಉತ್ಪನ್ನಗಳನ್ನು ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.
ಒಂದು ವೇಳೆ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆ-1897, ವಿಪತ್ತು ನಿರ್ವಹಣಾ ಕಾಯಿದೆ-2005, ಐಪಿಸಿ-188,268,269 ಮತ್ತು 270 ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ದ.ಕ ಇವರ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published.

Back to top button