ಸುದ್ದಿ

ದ.ಕ – ಬೋಳೂರಿನ ಮಹಿಳೆಯಲ್ಲಿ ಕೊರೊನಾ ಪಾಸಿಟಿವ್ ….

ಮಂಗಳೂರು: ಬೋಳೂರು ನಿವಾಸಿ, 58 ವರ್ಷದ ಮಹಿಳೆಯಲ್ಲಿ ಇಂದು ಕೊರೊನಾ ಸೋಂಕು ದೃಢವಾಗಿದೆ.
ಇವರು ಕಳೆದ ಕೆಲವು ದಿನಗಳ ಹಿಂದೆ ನಗರದ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ರೋಗಿ ಸಂಖ್ಯೆ 501 ರ ಸಂಪರ್ಕಕ್ಕೆ ಬಂದಿದ್ದರು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಮಹಿಳೆಯಲ್ಲಿ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರ ಗಂಟಲ ಸ್ರಾವವನ್ನು ಪರೀಕ್ಷೆಗಾಗಿ ಕಳುಹಿಸಿತ್ತು. ಕೊರೊನಾ ದೃಢವಾದ ಹಿನ್ನಲೆಯಲ್ಲಿ ಇದೀಗ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕಕ್ಕೆ ಬಂದಿದ್ದ ಜನರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ಬೋಳೂರು ಪರಿಸರದಲ್ಲಿ ಕೊರೊನಾ ಸೋಂಕು ದೃಡವಾದ ಹಿನ್ನಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಬುಧವಾರ ಸಂಜೆಯಿಂದ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿದ್ದಾರೆ.

Related Articles

Leave a Reply

Your email address will not be published.

Back to top button