ಸುದ್ದಿ

ದ.ಕ – ಮೇ 17 ರವರೆಗೆ ರಾತ್ರಿ ನಿಷೇಧಾಜ್ಞೆ….

ಮಂಗಳೂರು: ಜಿಲ್ಲೆಯಾದ್ಯಂತ ಮೇ.17 ರವರೆಗೆ ರಾತ್ರಿ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೋರೋನಾ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಸರಕಾರದ ಆದೇಶದಲ್ಲಿ ನೀಡಿದ ಸಡಿಲಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 4 ರಿಂದ 17 ರವರೆಗೆ ಪ್ರತಿ ದಿನ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿರುತ್ತಾರೆ.

Related Articles

Leave a Reply

Your email address will not be published.

Back to top button