ಧರ್ಮಸ್ಥಳ ಯೋಗ ಮತ್ತು ನೈತಿಕ ಶಿಕ್ಷಣ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ರಾಧಾಕೃಷ್ಣ ಭಟ್….
ಬಂಟ್ವಾಳ: ಪುಸ್ತಕಗಳನ್ನು ಓದುದರಿಂದ ಜೀವನದಲ್ಲಿ ಯಶಸ್ಸು ಸಾಧನೆಗೆ ಪ್ರೆರಣೆಯಾಗುತ್ತದೆ. ಶಾಂತಿವನ ಟ್ರಸ್ಟ್ ವತಿಯಿಂದ ಪ್ರತಿವರ್ಷ ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಮೌಲಿಕ ಕೃತಿಗಳಲ್ಲಿ ಸ್ಪರ್ಧೆ ನಡೆಸುತ್ತಿರುವುದು ವಿದ್ಯಾರ್ಥಿಗಳು ಪಾಠೇತರ ಪುಸ್ತಕಗಳನ್ನು ಓದುವುದಕ್ಕೆ ಅನುಕೂಲವಾಗಿದೆ ಎಂದು ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ರಾಧಾಕೃಷ್ಣ ಭಟ್ ಹೇಳಿದರು.
ಅವರು ಧರ್ಮಸ್ಥಳ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಹಾಗೂ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಶಾಂತಿವನ ಟ್ರಸ್ಟ್ ಶ್ರೀಕ್ಷೇತ್ರ ಧರ್ಮಸ್ಥಳ ಇದರ ವತಿಯಿಂದ ಬಂಟ್ವಾಳ ಎಸ್.ವಿ.ಎಸ್. ದೇವಳ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಆತಿಥಿಯಾಗಿ ಮಾತನಾಡಿದರು.
ಶಾಲಾ ಸಂಚಾಲಕ ಗೋವಿಂದ ಪ್ರಭು ಸಮಾರಂಭದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕ ಡಾ. ಐ.ಶಶಿಕಾಂತ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ ರಾಜ್ಯ ಮಟ್ಟದ ಅಂಚೆ-ಕುಂಚ ಚಿತ್ರಕಲಾ ಸ್ಪರ್ಧೆ ,ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಪ್ರಕಟನೆ ,ಪಂಚಮುಖಿ ವ್ಯಕ್ತಿತ್ವ ವಿಕಸನ ಶಿಬಿರ , ಯೋಗ ಮತ್ತು ಆರೋಗ್ಯ ಶಿಬಿರಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಪ್ರೌಢ ಶಾಲಾ ಮತ್ತು ಪ್ರಾಥಮಿಕ ವಿದ್ಯಾರ್ಥಿಗಳಿಗಾಗಿ ಈ ವರ್ಷ ಜ್ಞಾನ ಪಿಯೂಷಾ ಮತ್ತು ಜ್ಞಾನ ಮಂಜೂಷಾ ಪುಸ್ತಕಾಧಾರಿತ ಸ್ಪರ್ಧೆಗಳನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಶಾಲಾ ಮುಖ್ಯಶಿಕ್ಷಕಿ ನಂದಿನಿ ಬಾಯಿ ಸ್ವಾಗತಿಸಿದರು. ತಾಲೂಕು ಸಂಘಟಕ ಚೆನ್ನಕೇಶವ ಪೆರ್ನೆ ನಿರೂಪಿಸಿ, ವಂದಿಸಿದರು.