ಸುದ್ದಿ

ನಿವೃತ್ತ ಪ್ರಾಂಶುಪಾಲ, ಸಾಹಿತಿ ಯು.ಸುಬ್ರಾಯ ಗೌಡ ವಿಧಿವಶ…..

ಸುಳ್ಯ: ನಿವೃತ್ತ ಪ್ರಾಂಶುಪಾಲ, ಸಾಹಿತಿ ಯು.ಸುಬ್ರಾಯ ಗೌಡ(61) ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಶಿಕ್ಷಕರಾಗಿ, ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು ಬೆಳ್ಳಾರೆ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾಗಿದ್ದರು. ಸಾಹಿತ್ಯ ಕ್ಷೇತ್ರದಲ್ಲೂ ಸಕ್ರಿಯರಾಗಿದ್ದ ಅವರು, ಹಲವು ಕೃತಿಗಳನ್ನು ರಚಿಸಿದ್ದರು.
ಯುಸುಗೌ ಎಂದೇ ಖ್ಯಾತರಾಗಿದ್ದ ಅವರು ಕೆಲವು ಸಮಯದಿಂದ ಅಸೌಖ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.‌ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ನಿನ್ನೆಯಷ್ಟೇ ಸುಳ್ಯದ ಕೆ.ವಿ.ಜಿ.ಆಸ್ಪತ್ರೆಗೆ ದಾಖಲಿಸಲಾಗಿತ್ತು.

Related Articles

Leave a Reply

Your email address will not be published. Required fields are marked *

Back to top button