ಸುದ್ದಿ

ನೇಣು ಬಿಗಿದು ಮಹಿಳೆ ಆತ್ಮಹತ್ಯೆ….

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಬಳಿಯ ಪರ್ಲದಲ್ಲಿ ಮೂರು ಮಕ್ಕಳ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ತುಂಬೆ ನಿವಾಸಿ ಅಬ್ಬಾಸ್ ಅಲಿ ಎಂಬವರ ಪತ್ನಿ ರಮೀಝಾ ಬಾನು(29) ಆತ್ಮಹತ್ಯೆ ಮಾಡಿಕೊಂಡಿರುವವರು. ದಂಪತಿಗೆ ಮೂವರು ಮಕ್ಕಳು ಇದ್ದು, ತುಂಬೆ ನಿವಾಸಿಯಾದ ದಂಪತಿ ಕೆಲವು ಸಮಯದ ಹಿಂದೆ ಪೆರ್ಲದಲ್ಲಿ ಬಾಡಿಗೆಗೆ ಮನೆ ಪಡೆದು ವಾಸವಾಗಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಲಾಕ್ ಡೌನ್ ಸಮಯದಲ್ಲಿ ಹೊರ ಹೋಗದಂತೆ ಹೇಳಿದರೂ ಆಟೋ ಚಾಲಕನಾಗಿರೋ ಪತಿ ಆಟೋ ತೆಗೆದುಕೊಂಡು ಮನೆಯಿಂದ ಹೊರ ಹೋದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button