ಸುದ್ದಿ

ಪಶುವೈದ್ಯೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಎನ್ ಕೌಂಟರ್…..

ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳೂ ಎನ್’ಕೌಂಟರ್ ನಲ್ಲಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಮೊಹಮ್ಮದ್​ ಆರಿಫ್(26), ಚಿಂತಕುಂಟ ಚೆನ್ನಕೇಶವಲು (20), ಜೊಲು ಶಿವ(20) ಹಾಗೂ ಜೊಲು ನವೀನ್​ (20) ಎನ್‌ಕೌಂಟರ್‌ನಲ್ಲಿ ಹತರಾದ ಆರೋಪಿಗಳು.
ನಾಲ್ವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳನ್ನು14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳನ್ನು ಪೊಲೀಸರು ತನಿಖೆ ಹಿನ್ನೆಲೆಯಲ್ಲಿ ಅತ್ಯಾಚಾರ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಚಟಾನ್ ಪಲ್ಲಿ ಬ್ರಿಡ್ಜ್ ಬಳಿ ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಆತ್ಮರಕ್ಷಣೆಗಾಗಿ ಪೊಲೀಸರು ಎಲ್ಲಾ ಆರೋಪಿಗಳನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ಈ ಎನ್‌ಕೌಂಟರ್‌ ನ ಹಿಂದೆ ಇರುವ ವ್ಯಕ್ತಿ ಕನ್ನಡಿಗರಾದ ಸೈಬರಾಬಾದ್‌ ಪೊಲೀಸ್‌ ಆಯುಕ್ತ ವಿಶ್ವನಾಥ್ ಸಜ್ಜನರ್‌.ವಿಶ್ವನಾಥ್ ಸಜ್ಜನರ್ ಮೂಲತಃ ಕರ್ನಾಟಕದ ಹುಬ್ಬಳ್ಳಿ ಮೂಲದವರಾಗಿದ್ದು, ಈ ಹಿಂದೆಯೂ ಒಂದು ಎನ್‌ಕೌಂಟರ್‌ ಮಾಡಿದ್ದರು. ತೆಲಂಗಾಣದ ವಾರಂಗಲ್‌ನಲ್ಲಿ ವಿವಾಹಿತ ಮಹಿಳೆಯ ಮೇಲೆ ಆಟೋ ಚಾಲಕ ಆಸಿಡ್‌ ದಾಳಿ ನಡೆಸಿದ ಪ್ರಕರಣದಲ್ಲಿ ಆರೋಪಿಯ ಎನ್‌ಕೌಂಟರ್‌ ಮಾಡಿದ್ದರು.

Related Articles

Leave a Reply

Your email address will not be published.

Back to top button