ಸುದ್ದಿ

ಪಾವಂಜೆಯಲ್ಲಿ ಅಪರಿಚಿತ ವಾಹನ ಡಿಕ್ಕಿ-ಪಾದಚಾರಿ ದಾರುಣ ಸಾವು….

ಮಂಗಳೂರು : ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಮೃತಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುರತ್ಕಲ್ ಸಮೀಪದ ಪಾವಂಜೆ ದೇವಸ್ಥಾನದ ಬಳಿ ಡಿ.6ರ ರಾತ್ರಿ 9 ಗಂಟೆ ಸಮಯದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಅಪಘಾತದಲ್ಲಿ ಮೃತ ಪಾದಚಾರಿಯ ದೇಹ ಸಂಪೂರ್ಣ ಛಿದ್ರ ಛಿದ್ರಗೊಂಡಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಗುರುತುಪತ್ತೆಯಾಗಿಲ್ಲ.
ಹೆದ್ದಾರಿಯಲ್ಲಿ ಬೆಳಕಿನ ಕೊರತೆಯಿಂದಾಗಿ ಪಾದಚಾರಿಗಳು ನಡೆದುಕೊಂಡು ಹೋಗುತ್ತಿರುವುದು ವಾಹನ ಸವಾರರ ಗಮನಕ್ಕೆ ಬಾರದೆ ಇದ್ದುದರಿಂದ ಈ ಘಟನೆ ನಡೆದಿರಬಹುದು ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

Back to top button