ಸುದ್ದಿ

ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಪುರಸ್ಕಾರ….

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಟ್ಟದ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ 2018-19ನೇ ಸಾಲಿನಲ್ಲಿ ಗಣನೀಯ ಸಾಧನೆಯನ್ನು ಮಾಡಿದ್ದಕ್ಕಾಗಿ ಒಂದು ಲಕ್ಷ ರೂಪಾಯಿ ನಗದು ಪುರಸ್ಕಾರವನ್ನು ಗಳಿಸಿಕೊಂಡಿದೆ.
2018-19ನೇ ಶೈಕ್ಷಣಿಕ ಸಾಲಿನಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಲಯ, ಅಂತರ್ ವಲಯ , ವಿಶ್ವವಿದ್ಯಾನಿಲಯ ಮತ್ತು ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿತ್ತು. ಕಾಲೇಜಿನ ಈ ಸಾಧನೆಗಾಗಿ ವಿಶ್ವವಿದ್ಯಾನಿಲಯದ ಕ್ರೀಡಾಭಿವೃದ್ದಿ ಯೋಜನೆಯಲ್ಲಿ ಈ ಪುರಸ್ಕಾರವನ್ನು ನೀಡಲಾಗಿದೆ. ಬೆಂಗಳೂರಿನ ಎಂ.ಎಸ್.ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ಸಾಧಕರ ದಿನಾಚರಣೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ.ಕರಿಸಿದ್ದಪ್ಪ ಅವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ಸಾಧನೆಗೆ ಶ್ರಮವಹಿಸಿದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಹಾಗೂ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯವರು ಶ್ಲಾಘಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button