ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ……
ಉಡುಪಿ : ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲಿ ದಾಖಲಾಗಿರುವ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿಯವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ತಿಳಿದು ಬಂದಿದೆ.
ಶುಕ್ರವಾರ ಮಣಿಪಾಲ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ತಿಳಿಸಿದೆ.ಇಂದಿನಿಂದ ಗಣ್ಯರ ಭೇಟಿಗೆ ಅವಕಾಶ ನಿರಾಕರಿಸಲಾಗಿದೆ.
ಸ್ವಾಮೀಜಿ ಅವರ ಪ್ರಜ್ಞೆಯ ಸ್ಥಿತಿಯಲ್ಲಿ ಇದುವರೆಗೆ ಯಾವುದೇ ಸುಧಾರಣೆ ಕಂಡು ಬಂದಿಲ್ಲ. ಜೀವರಕ್ಷಕ ಸಾಧನಗಳ ಸಹಾಯದಲ್ಲಿ ಅವರಿದ್ದಾರೆ.
ಡಿಸೆಂಬರ್ 19ರಂದು ಸ್ವಾಮೀಜಿಯವರು ಜ್ವರದಿಂದ ಬಳಲುತ್ತಿದ್ದರೂ ಎರಡು ಮೂರು ಕಾರ್ಯಕ್ರಮಗಳನ್ನು ಮುಗಿಸಿ ಉಡುಪಿಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸ್ವಲ್ಪ ಗುಣಮುಖರಾಗಿ ಮಠಕ್ಕೆ ಮರಳಿದ್ದರು. ಆದರೆ ಡಿ.20ರಂದು ಮುಂಜಾನೆ ಉಸಿರಾಟದ ಸಮಸ್ಯೆ ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.




