ಸುದ್ದಿ

ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಳ್ಯ ಅಜ್ಜಾವರದ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖ…

ಮಂಗಳೂರು: ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ಸುಳ್ಯ ಅಜ್ಜಾವರದ ವ್ಯಕ್ತಿ ಗುಣಮುಖರಾಗಿದ್ದು ಇದೀಗ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಮಾರ್ಚ್ 18ರಂದು ಸುಳ್ಯ ಮೂಲದ ವ್ಯಕ್ತಿ ದುಬೈನಿಂದ ಮಂಗಳೂರಿಗೆ ಆಗಮಿಸಿ ತನ್ನ ಮನೆಗೆ ತೆರಳಿದ್ದರು ಹಾಗೂ ಮನೆಯಲ್ಲೇ ನಿಗಾದಲ್ಲಿದ್ದರು. ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಮಾರ್ಚ್ 28ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೀಗ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.ಏ. 11, 12ರಂದು ಮತ್ತೆ ಪರೀಕ್ಷೆ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ. ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button