ಸುದ್ದಿ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ಅನುದಾನ -ಶಾಸಕ ವೇದವ್ಯಾಸ ಕಾಮತ್…….

ಮಂಗಳೂರು:ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ಅನುದಾನ ಬಿಡುಗಡೆಗೊಳಿಸಲು ಸರಕಾರ ಸಮ್ಮತಿಸಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಲೋಕೋಪಯೋಗಿ ಇಲಾಖಾ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿಗಾಗಿ ರಾಜ್ಯದ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಹತ್ತು ಕೋಟಿ ಅನುದಾನವನ್ನು ಅನುಮೋದಿಸಿದ್ದಾರೆ. ಹಾಗು ತಮ್ಮ ವಿವೇಚನಾ ನಿಧಿಯ ಅಡಿಯಲ್ಲಿ ಎಸ್ ಎಫ್ ಸಿ ವಿಶೇಷ ಅನುದಾನವಾಗಿ 15 ಕೋಟಿ ರೂಪಾಯಿಯನ್ನು ಅನುಮೋದಿಸಿದ್ದಾರೆ. ಹೀಗೆ ಒಟ್ಟು 25 ಕೋಟಿ ರೂಪಾಯಿಗಳನ್ನು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರಕಾರದ ಮೂಲಕ ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಬಿಡುಗಡೆಗೊಳಿಸಿದ್ದಾರೆ ಎಂದವರು ತಿಳಿಸಿದ್ದಾರೆ.
ಈಗ ಅಭಿವೃದ್ಧಿಯ ಹೊಸ‌ ಶಖೆ ಪ್ರಾರಂಭವಾಗಿದೆ. ನಮ್ಮ ಸರಕಾರದ ಅವಧಿಯಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಯ ಉತ್ತುಂಗಕ್ಕೇರಿಸುವ ಕನಸಿದೆ.ಅದನ್ನು ಸಾಕಾರಗೊಳಿಸಲು ಸರಕಾರದಿಂದ ಮತ್ತಷ್ಟು ಅನುದಾನ ತರುವಲ್ಲಿ ನಿರಂತರವಾಗಿ ಶ್ರಮಿಸುವುದಾಗಿ ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

Related Articles

Leave a Reply

Your email address will not be published.

Back to top button