ಸುದ್ದಿ

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ, ಅ.30ರಂದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ – ದಿನೇಶ್ ಗುಂಡೂರಾವ್…..

ಮಂಗಳೂರು :ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಅ.30ರಂದು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಹಿಂದಿನ ಸಿದ್ದರಾಮಯ್ಯ ಸರ್ಕಾರ ಮಂಗಳೂರಿಗೆ ಸಾಕಷ್ಟು ಅನುದಾನ ನೀಡಿದೆ. ಕಳೆದ ಐದು ವರ್ಷದಲ್ಲಿ ಮಹಾನಗರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಈ ಬಾರಿ ಪಕ್ಷ ಒಗ್ಗಟ್ಟಿನಿಂದ ಆತ್ಮವಿಶ್ವಾಸದಿಂದ ಚುನಾವಣೆ ಎದುರಿಸುತ್ತಿದ್ದು ಕಳೆದ ಸಾಲಿಗಿಂತ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ ಅವರು, ಭೀಕರ ಪ್ರಕೃತಿ ವಿಕೋಪ ಸಂಭವಿಸಿದರೂ ಅದನ್ನು ನಿಭಾಯಿಸಲಾಗದ ಅಸಹಾಯಕ ಸ್ಥಿತಿಯಲ್ಲಿ ರಾಜ್ಯ ಸರ್ಕಾರವಿದೆ. ಸಕಾಲಕ್ಕೆ ಎಚ್ಚೆತ್ತುಕೊಂಡು ಕೆಲಸ ಮಾಡಬೇಕಾದ ಸರ್ಕಾರಕ್ಕೆ ಏನು ಮಾಡಬೇಕು ಎಂದು ಗೊತ್ತಾಗುತ್ತಿಲ್ಲ. ಒಬ್ಬರನ್ನೊಬ್ಬರು ಕಂಡರಾಗದ ಸ್ಥಿತಿಯಲ್ಲಿ ಬಿಜೆಪಿಯ ಶಾಸಕರು, ಸಚಿವರಿದ್ದಾರೆ. ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

Related Articles

Leave a Reply

Your email address will not be published. Required fields are marked *

Back to top button