ಮಂಗಳೂರು ಮಹಾ ನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಧಿಕಾರ….

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಭಾರತೀಯ ಜನತಾಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ.
60 ವಾರ್ಡ್ ಗಳಲ್ಲಿ 44ರಲ್ಲಿ ಬಿಜೆಪಿ ಗೆಲುವು ತನ್ನದಾಗಿಸಿದ್ದು, ಕಾಂಗ್ರೆಸ್ 14 ಸ್ಥಾನಗಳಿಗೆ ಮಾತ್ರ ತೃಪ್ತಿಪಟ್ಟುಕೊಂಡಿದೆ. ಎಸ್ ಡಿಪಿಐ 2 ವಾರ್ಡ್ ಗಳಲ್ಲಿ ಜಯಗಳಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ಅಸ್ತಿತ್ವಕ್ಕೆ ಬಂದ ಬಳಿಕ ಇದು ಏಳನೆಯ ಅವಧಿಯ ಚುನಾವಣೆಯಾಗಿದೆ. ಪಾಲಿಕೆಯ 39 ವರ್ಷಗಳ ಇತಿಹಾಸದಲ್ಲಿ 31 ಮೇಯರ್ ಗಳ ಅಧಿಕಾರವನ್ನು ಕಂಡಿದೆ. ಆರು ಬಾರಿ ನಡೆದ ಚುನಾವಣೆಯಲ್ಲಿ 5 ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಕೇವಲ ಒಂದು ಬಾರಿ ಮಾತ್ರ ಬಿಜೆಪಿ ಜಯಗಳಿಸಿತ್ತು.ಕಳೆದ ಬಾರಿ 35 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಏರಿದ್ದ ಕಾಂಗ್ರೆಸ್ ಗೆ ತೀವ್ರ ಹಿನ್ನಡೆಯಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button