ಮಂಗಳವಾರ – ದ.ಕ 27 ಹಾಗೂ ರಾಜ್ಯದಲ್ಲಿ 1280 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಮಂಗಳವಾರ ) ದ.ಕ ಜಿಲ್ಲೆಯಲ್ಲಿ 27 ಹಾಗೂ ರಾಜ್ಯದಲ್ಲಿ 1280 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 27 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 32179 ಕ್ಕೆ ಏರಿಕೆಯಾಗಿದೆ. ಇಂದು ಇಬ್ಬರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೋನಾ ಸೋಂಕಿಗೆ ಒಟ್ಟು 722 ಮಂದಿ ಬಲಿಯಾಗಿದ್ದಾರೆ.ಇಂದು 47 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1280 ಮಂದಿಗೆ ಕೊರೋನ ಪಾಸಿಟಿವ್ ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 8,95,284ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಸೋಂಕಿನಿಂದ 11,880 ಮಂದಿ ಬಲಿಯಾಗಿದ್ದಾರೆ.ರಾಜ್ಯದಲ್ಲಿ ಇಂದು 1060 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 8,58,370 ಏರಿಕೆಯಾಗಿದೆ. ಇನ್ನು 25,015 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 275 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button