Warning: file_put_contents(/www/wwwroot/varthaloka.com/wp-content/uploads/.htaccess): failed to open stream: Permission denied in /www/wwwroot/varthaloka.com/wp-content/plugins/wp-optimize/includes/class-wp-optimize-htaccess.php on line 135

ಮಾಜಿ ಡಿಸಿಎಂ ಜಿ ಪರಮೇಶ್ವರ್ ಮನೆ- ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ.... - VarthaLoka
ಸುದ್ದಿ

ಮಾಜಿ ಡಿಸಿಎಂ ಜಿ ಪರಮೇಶ್ವರ್ ಮನೆ- ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ….

ಬೆಂಗಳೂರು:ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಆರ್.ಎಲ್ ಜಾಲಪ್ಪ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ಇಲಾಖೆ ಗುರುವಾರ ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ತುಮಕೂರಿನ ಡಾ.ಜಿ.ಪರಮೇಶ್ವರ್ ರವರ ಸಿದ್ಧಾರ್ಥ್ ಇಂಜಿನಿಯರಿಂಗ್ ಕಾಲೇಜು ಮತ್ತು ಡಿಗ್ರಿ ಕಾಲೇಜುಗಳು, ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಾ.ಜಿ.ಪರಮೇಶ್ವರ್ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ. ಮೂರು ಕಾರುಗಳಲ್ಲಿ ಬಂದ ಆಧಿಕಾರಿಗಳ ತಂಡ ಕಾಲೇಜಿನ ಸಿಬ್ಬಂದಿಯನ್ನು ಹೊರಗೆ ಕಳಿಸಿ ಕಾಲೇಜಿನಲ್ಲಿರುವ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಕೋಲಾರದಲ್ಲಿರುವ ಕಾಂಗ್ರೆಸ್ ಮುಖಂಡ ಆರ್.ಎಲ್ ಜಾಲಪ್ಪ ಅವರ ಒಡೆತನದ ಆರ್.ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನ ಮೇಲೆಯೂ ಐಟಿ ದಾಳಿಯಾಗಿದೆ. ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button