ಸುದ್ದಿ

ಮೂವರು ವಿದ್ಯಾರ್ಥಿಗಳಿಗೆ ಕೊರೊನಾ ಶಂಕೆ – ಮಣಿಪಾಲ ಆಸ್ಪತ್ರೆಗೆ ದಾಖಲು….

ಉಡುಪಿ: ಕೊರೋನಾದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಮಣಿಪಾಲ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಣಿಪಾಲದ ಮೂವರು ವಿದ್ಯಾರ್ಥಿಗಳು ಆಮೇರಿಕಾ, ಮಲೇಶ್ಯ ಮತ್ತು ಕುವೈಟ್ ನಿಂದ ವಾಪಾಸಾಗಿದ್ದು ಅವರಲ್ಲಿ ಕೊರೋನಾ ಲಕ್ಷಣ ಕಂಡು ಬಂದ ಹಿನ್ನಲೆಯಲ್ಲಿ ಮಣಿಪಾಲ ಕೆ ಎಮ್ ಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯಾರ್ಥಿಗಳಿಗೆ ಐಸೋಲೇಶನ್ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಬೆಂಗಳೂರು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಎರಡು ದಿನದ ಒಳಗೆ ವೈದ್ಯಕೀಯ ವರದಿ ಬರಲಿದ್ದು ನಂತರವಷ್ಟೇ ವೈರಸ್ ತಗಲಿದೆಯೋ ಇಲ್ಲವೋ ಎಂಬುದು ತಿಳಿಯಲಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button