ಸುದ್ದಿ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು:ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ….

ಪುತ್ತೂರು: ಜೀವನದಲ್ಲಿ ಬದಲಾವಣೆಗಳು ಅನಿವಾರ್ಯ, ತಂತ್ರಜ್ಞಾನಗಳು ಬದಲಾದಂತೆ ಬಳಕೆದಾರನೂ ಅದಕ್ಕೆ ಹೊಂದಿಕೊಳ್ಳಬೇಕು ಇದರಿಂದ ಸಮಾಜದ ಮತ್ತು ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸ್ವಿಸ್ ಸಿಂಗಾಪುರ್ ಎಂಟಪ್ರ್ರೈಸಸ್‍ನ ಪೂರ್ವ ಅಧ್ಯಕ್ಷ ಹಾಗೂ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಲಹಾ ಸಮಿತಿಯ ಸದಸ್ಯರೂ ಆದ ಶ್ರೀ.ಚಂದ್ರಕಾಂತ್ ರಾವ್ ಇನ್ನ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಮತ್ತು ಪ್ರಸಕ್ತ ವರ್ಷದ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತಾಡಿದರು. ವಿಧ್ಯಾರ್ಥಿಗಳು ವೃತ್ತಿಪರರಾಗಿ ತಮ್ಮನ್ನು ತಾವು ಬದಲಾಯಿಸಿಕೊಳ್ಳಬೇಕು ಮತ್ತು ತಂಡಗಳಾಗಿ ಕೆಲಸ ಮಾಡಬೇಕು ಇದರಿಂದ ಜೀವನದ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ. ಯಾವುದೇ ಸನ್ನಿವೇಶಗಳು ಬಂದರೂ ಅದನ್ನು ಎದುರಿಸಿ ಕಾರ್ಯನಿರ್ವಹಿಸುವ ಛಾತಿಯನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಮಾತನಾಡಿ ಪಾಠದ ಜತೆ ಪಠ್ಯೇತರ ವಿಷಯಗಳಲ್ಲೂ ವಿದ್ಯಾರ್ಥಿಗಳು ಸಕ್ರಿಯರಾಗಿ ಭಾಗವಹಿಸಬೇಕು. ಹೆಚ್ಚು ವ್ಯಾಪ್ತಿಯನ್ನು ಹೊಂದಿರುವ ಉದ್ಯಮಾಡಳಿತ ವಿಭಾಗದ ವಿಷಯಗಳಲ್ಲಿ ಪರಿಣತಿಯನ್ನು ಹೊಂದಿದರೆ ಸಮಾಜದಲ್ಲಿ ಜವಾಬ್ಧಾರಿಯುತ ಸ್ಥಾನವನ್ನು ಪಡೆಯಬಹುದು ಎಂದರು.
ಎಂಬಿಎ ವಿಭಾಗದ ನಿರ್ದೇಶಕ ಡಾ.ಶೇಖರ್.ಎಸ್.ಐಯ್ಯರ್ ವಿಭಾಗದ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್ ಮಾತನಾಡಿ ವಿವೇಕಾನಂದ ಸಂಸ್ಥೆಯು ಶೈಕ್ಷಣಿಕ ಚಟುವಟಿಕೆಗಳ ಜತೆಗೆ ವಿದ್ಯಾರ್ಥಿಗಳನ್ನು ಸಚ್ಚಾರಿತ್ರ್ಯವಂತರನ್ನಾಗಿಸುವ ಕೆಲಸವನ್ನೂ ಮಾಡುತ್ತಿದೆ, ಇದಕ್ಕೆ ವಿದ್ಯಾರ್ಥಿಗಳೂ ಸೂಕ್ತ ರೀತಿಯಲ್ಲಿ ಸಹಕರಿಸಬೇಕು ಎಂದರು.
ಕ್ಯಾಂಪಸ್ ನಿರ್ದೇಶಕ ಪ್ರೊ.ವಿವೇಕ್ ರಂಜನ್ ಭಂಡಾರಿ, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಸಮಾರಂಭದಲ್ಲಿ ಹಾಜರಿದ್ದರು.
ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ.ಆಶ್ಲೆ.ಡಿ’ಸೋಜ ಸ್ವಾಗತಿಸಿ, ಪ್ರೊ.ರೇಶ್ಮಾ ಪೈ ವಂದಿಸಿದರು. ವಿದ್ಯಾರ್ಥಿನಿ ಸುಹೈಲಾ ಜಬೀನಾ ಕಾರ್ಯಕ್ರಮ ನಿರ್ವಹಿಸಿದರು.

Related Articles

Leave a Reply

Your email address will not be published. Required fields are marked *

Back to top button