ಶ್ರೀರಾಮ ವಿದ್ಯಾಕೇಂದ್ರಕ್ಕೆ ಸಣ್ಣ ನೀರಾವರಿ ಸಚಿವ ಜೆ ಸಿ ಮಾಧುಸ್ವಾಮಿ ಭೇಟಿ….
ಬಂಟ್ವಾಳ:ಶಿಕ್ಷಣವೆಂಬುದು ಗುರಿಯನ್ನು ತಲುಪಿಸುವ ಮಾರ್ಗವನ್ನು ತೋರಿಸುತ್ತದೆ. ಸಾಧನೆ ಎಂಬುದು ಸಾಧಕರ ಸೊತ್ತು. ಶ್ರಮ, ಪ್ರಯತ್ನ, ಶಿಸ್ತು – ಸಂಸ್ಕಾರ ಬೇಕಾಗುತ್ತದೆ. ಈ ಶಿಕ್ಷಣ ಸಂಸ್ಥೆಯಲ್ಲಿ ಮೌಲ್ಯಯುತವಾದ, ಸಂಸ್ಕಾರಯುತವಾದ ಶಿಕ್ಷಣವನ್ನು ಪಡೆಯುತ್ತಿರುವ ಮಕ್ಕಳು ಪುಣ್ಯವಂತರು ಎಂದು ಕರ್ನಾಟಕ ಸರಕಾರದ ಕಾನೂನು ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.
ಅವರು ಡಿ.7 ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಚಟುವಟಿಕೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಿಪಟೂರು ಶಾಸಕ ನಾಗೇಶ್ , ಪುತ್ತೂರು ಶಾಸಕ ಸಂಜೀವ ಮಠಂದೂರು , ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯವಾದಿ ಹಿರಿಯ ವಿದ್ಯಾರ್ಥಿ ಅರುಣಶ್ಯಾಮ , ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಹಣಾ ಅಭಿಯಂತರ ಗೋಕುಲದಾಸ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ,ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಾಯಾಜಿ , ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಎನ್. ಉಪಸ್ಥಿತರಿದ್ದರು.
ಪದವಿ ವಿದ್ಯಾಲಯದ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್ ಕಟ್ಟೆ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ಶಿಕ್ಷಕ ಜಿನ್ನಪ್ಪ ವಂದಿಸಿದರು.