ಸರಕಾರಿ ಪ್ರೌಢಶಾಲೆ ಕಬಕ – ತರಬೇತಿ ಕಾರ್ಯಕ್ರಮ…

ಪುತ್ತೂರು: ಸರಕಾರಿ ಪ್ರೌಢಶಾಲೆ ಕಬಕದ ಸಾಹಿತ್ಯ ಸಂಘದ ಆಶ್ರಯದಲ್ಲಿ ಅಧ್ಯಯನ ತಂತ್ರ ಮತ್ತು ಪರೀಕ್ಷಾ ಸಿದ್ಧತೆ ತರಬೇತಿ ಕಾರ್ಯಕ್ರಮ ಜ. 13ರಂದು ಸರಕಾರಿ ಪ್ರೌಢಶಾಲೆ ಕಬಕದಲ್ಲಿ ನಡೆಯಿತು.
ಕಾರ್ಯಕ್ರಮದ ಆರಂಭದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಜೆ.ಸಿ.ಐ.ರಾಜ್ಯ ತರಬೇತುದಾರರಾದ ಜಯಾನಂದ ಪೆರಾಜೆಯವರು ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.
ಶಾಂತಾ ಪುತ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಪ್ರೇಮಲತಾ ಎಂ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಪ್ರಾಂಶುಪಾಲರು ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು.
ಸರಕಾರಿ ಪ್ರೌಢಶಾಲೆ ಕಬಕದ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಯ್ಯ.ಕೆ.ಸ್ವಾಗತಿಸಿದರು.ವಿಜ್ಞಾನ ಶಿಕ್ಷಕಿ ಜಯಲಲಿತ ಸಂಪನ್ಮೂಲ ವ್ಯಕ್ತಿಗಳ ಪರಿಚಯ ಮಾಡಿದರು.ಹಿಂದಿ ಶಿಕ್ಷಕಿ ದಿವ್ಯಶ್ರೀ ಧನ್ಯವಾದವಿತ್ತರು. ಕಾರ್ಯಕ್ರಮದ ಕೊನೆಯಲ್ಲಿ ಅತಿಥಿಗಳನ್ನು, ಸಂಪನ್ಮೂಲ ವ್ಯಕ್ತಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

Exit mobile version