ಸುದ್ದಿ

ಸಿಎಎ ಪ್ರತಿಭಟನೆಗೆ ತಂದಿದ್ದ ಕುರ್ಚಿಗಳಿದ್ದ ಲಾರಿಗೆ ಬೆಂಕಿ…

ಮಂಗಳೂರು : ದೇರಳಕಟ್ಟೆಯ ಸಿಟಿ ಗ್ರೌಂಡ್ ನಲ್ಲಿ ರವಿವಾರ ಏರ್ಪಡಿಸಿದ್ದ ಪೌರತ್ವ ಕಾಯಿದೆ ವಿರೋಧಿಸಿ ಮುಸ್ಲಿಂ ಸಂಘನೆಗಳ ಪ್ರತಿಭಟನಾ ಸಭೆಯ ಬಳಿಕ ಕುರ್ಚಿಗಳನ್ನು ತುಂಬಿದ ಈಚರ್ ಲಾರಿ ಬೆಂಕಿಗಾಹುತಿಯಾದ ಘಟನೆ ತಡರಾತ್ರಿ 2.30ರ ಸುಮಾರಿಗೆ ನಡೆದಿದೆ. ಇಲ್ಲೇ ಇರಿಸಲಾಗಿತ್ತು.
ತಡ ರಾತ್ರಿ 2:30 ಗಂಟೆ ಸುಮಾರಿಗೆ ಬೆಂಕಿ ತಗುಲಿದ್ದು, ಸಂಪೂರ್ಣ ಸುಟ್ಡು ಹೋಗಿದೆ. ಕಿಡಿಗೇಡಿಗಳು ಈ ಕೃತ್ಯ ನಡೆಸಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ.ನೂರಾರು ಜನ ಜಮಾಸಿಯಿದ್ದು ಘಟನೆಯ ಬಗ್ಗೆ ಸರಿಯಾದ ತನಿಖೆ ಮಾಡದೇ ಇದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button