Warning: file_put_contents(/www/wwwroot/varthaloka.com/wp-content/uploads/.htaccess): failed to open stream: Permission denied in /www/wwwroot/varthaloka.com/wp-content/plugins/wp-optimize/includes/class-wp-optimize-htaccess.php on line 135

Warning: file_put_contents(/www/wwwroot/varthaloka.com/wp-content/uploads/.htaccess): failed to open stream: Permission denied in /www/wwwroot/varthaloka.com/wp-content/plugins/wp-optimize/includes/class-wp-optimize-htaccess.php on line 135
ಸೆ. 30: ವಿವೇಕಾನಂದ ಕಾಲೇಜ್‍ನಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ.... - VarthaLoka
ಸುದ್ದಿ

ಸೆ. 30: ವಿವೇಕಾನಂದ ಕಾಲೇಜ್‍ನಲ್ಲಿ ರಾಜ್ಯ ಮಟ್ಟದ ಕಾರ್ಯಾಗಾರ….

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ಅದರ ಅಂಗ ಸಂಸ್ಥೆ ವಿವೇಕಾನಂದ ಅಧ್ಯಯನ ಕೇಂದ್ರ `ಯಶಸ್’ ಇದರ ನೇತೃತ್ವದಲ್ಲಿ “ದೃಷ್ಠಿ” ಎಂಬ ಕರ್ನಾಟಕ ರಾಜ್ಯದ ಐಎಎಸ್ ತರಬೇತಿ ಸಂಸ್ಥೆಗಳ ಮತ್ತು ವಿದ್ಯಾರ್ಥಿಗಳ ರಾಜ್ಯಮಟ್ಟದ ಕಾರ್ಯಾಗಾರ ಸೆ. 30ರಂದು ಕಾಲೇಜಿನಲ್ಲಿ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣಭಟ್ ತಿಳಿಸಿದ್ದಾರೆ.
ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಾರ್ಯಾಗಾರವನ್ನು ಬೆಳಗ್ಗೆ ಕೇಂದ್ರದ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಇಲಾಖಾ ಸಚಿವ ಪ್ರಹ್ಲಾದ್ ವಿ. ಜೋಷಿ ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು, ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ ಸಿ.ಆರ್. ಸಮಾರೋಪದ ಮಾತುಗಳನ್ನು ಆಡಲಿದ್ದಾರೆ. ಪುತ್ತೂರಿನ ಸಹಾಯಕ ಕಮಿಷನರ್ ಹೆಚ್.ಕೆ. ಕೃಷ್ಣಮೂರ್ತಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿದ್ಯಾರ್ಥಿಗಳಿಗೆ ಎದುರಾಗುವ ಸಾಮಾನ್ಯ ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದನ್ನು ತಿಳಿಸುವ ಮತ್ತು ತರಬೇತಿಗಳನ್ನು ನೀಡುವ ಸಂಸ್ಥೆಗಳಿಗೆ ಸಾಮಾನ್ಯವಾಗಿ ಎದುರಾಗುವ ಸಮಸ್ಯೆಗಳಿಗೆ ಮೂರು ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಂಸ್ಥೆಯ ಪ್ರತಿನಿಧಿಗಳಿಗೆ ಬೇರೆ ಬೇರೆ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಯಶಸ್‍ನ ಅಧ್ಯಕ್ಷ ಕೃಷ್ಣನಾರಾಯಣ ಮುಳಿಯ, ಕಾರ್ಯದರ್ಶಿ ಮುರಳೀಕೃಷ್ಣ ಚಳ್ಳಂಗಾರು, ಸಂಯೋಜಕ ಗೋವಿಂದರಾಜ್ ಶರ್ಮ ಮತ್ತು ವಿವೇಕಾನಂದ ಪದವಿ ಕಾಲೇಜು ಸಮಿತಿ ಸದಸ್ಯ ಎಂ.ಟಿ. ಜಯರಾಮ ಭಟ್ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button